ನವದೆಹಲಿ: ‘2024ರ ಲೋಕಸಭಾ ಚುನಾವಣೆಯಲ್ಲಿ ಬಿಜು ಜನತಾದಳವು (ಬಿಜೆಡಿ) ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಈ ಹಿಂದೆ ನಡೆದುಕೊಂಡಂತೆ ನಾವು ಏಕಾಂಗಿಯಾಗಿ ಸ್ಪರ್ಧೆ ಮಾಡಲಿದ್ದೇವೆ’ ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಗುರುವಾರ ಇಲ್ಲಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ರಾಜ್ಯಕ್ಕೆ ಸಂಬಂಧಿಸಿದ ಅಭಿವೃದ್ಧಿ ವಿಷಯಗಳ ಬಗ್ಗೆ ಅರ್ಧ ಗಂಟೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎರಡು ದಿನಗಳ ಹಿಂದೆ ನನ್ನ ಮತ್ತು ನಿತೀಶ್ ಕುಮಾರ್ ಅವರ ಭೇಟಿ ಸೌಜನ್ಯದ ಭೇಟಿಯಾಗಿತ್ತು’ ಎಂದರು.

ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಸಮಾನ ಅಂತರ ಕಾಯ್ದುಕೊಳ್ಳುವ ಪಕ್ಷದ ಎಂದಿನ ನಿಲುವನ್ನು ಪಟ್ನಾಯಕ್ ಅವರು ಈ ಮೂಲಕ ಮತ್ತೊಮ್ಮೆ ಪುನರುಚ್ಚರಿಸಿದರು. ಸದ್ಯ ಬಿಜೆಡಿಯು ಎನ್ಡಿಎ ಭಾಗವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.