ತಿರುವನಂತಪುರ: ಶಬರಿಮಲೆ ದೇವಾಲಯಕ್ಕೆ ಎಲ್ಲ ವಯೋಮಿತಿಯ ಮಹಿಳೆಯರ ಪ್ರವೇಶವನ್ನು ಖಂಡಿಸಿ ಹೋರಾಟ ನಡೆಸಿದ ಪ್ರತಿಭಟನಕಾರರನ್ನು ಬಂಧಿಸಿದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಡಿಜಿಪಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸಿದರು.

ಅಲ್ಲದೇ, ಬಿಜೆಪಿ ಕಾರ್ಯಕರ್ತರುರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ತಿರುವನಂತಪುರದಲ್ಲಿ ಮಾತನಾಡಿದ ಪಕ್ಷದ ರಾಜ್ಯ ಅಧ್ಯಕ್ಷ ಪಿ.ಎಸ್.ಶ್ರೀಧರನ್ ಪಿಳ್ಳೈ, ‘ಆಡಳಿತರೂಢಾ ಸಿಪಿಐ(ಎಂ) ಪಕ್ಷ ಹಿಂಸಾಚಾರಕ್ಕೆ ಪ್ರೇರಣೆ ನೀಡುತ್ತಿದ್ದು, ಆ ಪಕ್ಷದ ಜನ ಬೆಂಬಲ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ’ ಎಂದರು.

ಪಕ್ಷದ ಏಕೈಕ ಶಾಸಕ ಒ.ರಾಜಗೋಪಾಲ್, ಹಿರಿಯ ಕಮ್ಯುನಿಸ್ಟ್ ನಾಯಕ ಎಂ.ಎಂ.ಲಾರೆನ್ಸ್ ಅವರ ಮೊಮ್ಮಗ ಸೇರಿದಂತೆ ಅನೇಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸುಪ್ರೀಂಕೋರ್ಟ್ ತೀರ್ಪು ವಿರುದ್ಧ ಪ್ರತಿಭಟನೆ ಹಾಗೂ ಹಿಂಸಾಚಾರ ನಡೆಸಿದ 3,500 ಮಂದಿಯನ್ನು ಬಂಧಿಸಲಾಗಿದ್ದು, 529 ಪ್ರಕರಣಗಳನ್ನು ದಾಖಲಿಸಲಾಗಿದೆ. ಅಕ್ಟೋಬರ್ 27ರಂದು ರಾಜ್ಯಕ್ಕೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಭಕ್ತರು ನಡೆಸುತ್ತಿರುವ ಪ್ರತಿಭಟನೆಗೆ ಪೂರ್ಣ ಬೆಂಬಲ ನೀಡಲಿದ್ದೇವೆ ಎಂದು ಘೋಷಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.