ಮೀರತ್(ಉತ್ತರ ಪ್ರದೇಶ): ಪಾಲಿಕೆ ಸಭೆಯಲ್ಲಿ ವಿರೋಧ ಪಕ್ಷದ ಕೌನ್ಸಿಲರ್‌ಗಳನ್ನು ಥಳಿಸಿದ ಘಟನೆಗೆ ಸಂಬಂಧಿಸಿದಂತೆ ಆಡಳಿತ ಪಕ್ಷ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ರಾಷ್ಟ್ರೀಯ ಲೋಕದಳ(ಆರ್‌ಎಲ್‌ಡಿ) ಪಕ್ಷದ ಅಧ್ಯಕ್ಷ ಜಯಂತ್ ಚೌಧರಿ, ‘ಬಿಜೆಪಿ ಅಧಿಕಾರದ ಅಮಲಿನಲ್ಲಿ ತೇಲಾಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಮೀರತ್‌ನ ಮಹಾನಗರ ಪಾಲಿಕೆ ಸಭೆಯಲ್ಲಿ ಬಿಜೆಪಿ ಮತ್ತು ವಿರೋಧ ಪಕ್ಷಗಳ ಸದಸ್ಯರು ಪರಸ್ಪರ ಹೊಡೆದಾಡಿಕೊಂಡಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಧಿಕಾರದ ಅಮಲಿನಲ್ಲಿ ಬಿಜೆಪಿ ನಾಯಕರು ಗುದ್ದಾಟ ನಡೆಸಿದ್ದಾರೆ. ಥಳಿತಕ್ಕೊಳಗಾದವರಿಗೆ ಬೆದರಿಕೆ ಹಾಕುತ್ತಿದ್ದಾರೆ’ ಎಂದರು.

‘ಇಂತಹ ಕಿಡಿಗೇಡಿಗಳು ತಮ್ಮ ತಂಡದಲ್ಲಿದ್ದಾರೆ ಎಂದು ಯೋಗಿ ಆದಿತ್ಯನಾಥ ಮನವರಿಕೆ ಮಾಡಿಕೊಳ್ಳಲಿ. ಕೇವಲ ತಮ್ಮ ಶಾಸಕರು, ಸಚಿವರ ಹಿತಾಸಕ್ತಿ ಮುಖ್ಯವೇ ಅಥವಾ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜನಪ್ರತಿನಿಧಿಗಳ ಹಕ್ಕುಗಳು ಮುಖ್ಯವೇ ಎಂಬುದನ್ನು ಸ್ಪಷ್ಟಪಡಿಸಲಿ. ಆ ಮೂಲಕ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.