ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾದ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ಪಕ್ಷದ ಕೆಲ ರಾಜ್ಯಗಳ ಘಟಕಗಳಲ್ಲಿ ಸಾಂಸ್ಥಿಕ ಬದಲಾವಣೆ ಮಾಡುವ ಕುರಿತು ಹಿರಿಯ ಮುಖಂಡರು ಚರ್ಚೆ ನಡೆಸಿದ್ದಾರೆ.

ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ, ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸಭೆ ನಡೆಸಿ ಚರ್ಚಿಸಿದ್ದಾರೆ. ‘ಜಾತಿ ಸಮೀಕರಣ ಮತ್ತು ಪಕ್ಷದ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಬದಲಾವಣೆ ಆಗಲಿದೆ’ ಎಂದು ಸಾಂಸ್ಥಿಕ ಬದಲಾವಣೆ ಪ್ರಕ್ರಿಯೆ ಉಸ್ತುವಾರಿಯ ಪ್ರಮುಖರೊಬ್ಬರು ತಿಳಿಸಿದ್ದಾರೆ.

ಕರ್ನಾಟಕದ ಬಿಜೆಪಿ ಘಟಕದ ಅಧ್ಯಕ್ಷರು ಸೇರಿದಂತೆ ವಿವಿಧ ಘಟಕಗಳಲ್ಲಿ ಬದಲಾವಣೆ ಆಗಲಿದೆ. ಉತ್ತರ ಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯ ಘಟಕಗಳಲ್ಲಿಯೂ ಬದಲಾವಣೆ ಆಗಬಹುದು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.