ಪಿಲಿಭಿತ್ (ಉತ್ತರ ಪ್ರದೇಶ): ಬಿಜೆಪಿ ಶಾಸಕ ಬಾಬುರಾಮ್ ಪಾಸ್ವಾನ್ ಅವರ ಸಂಬಂಧಿ ಫೂಲ್ಚಂದ್ ಅವರನ್ನು ಶನಿವಾರ ತಡರಾತ್ರಿ ದುಷ್ಕರ್ಮಿಗಳು ಭೀಕರವಾಗಿ ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದುಷ್ಕರ್ಮಿಗಳು ಫೂಲ್ಚಂದ್ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಬಳಿಕ ಫೂಲ್ಚಂದ್ ಸೇರಿದಂತೆ ಕುಟುಂಬಸ್ಥರನ್ನು ಮನಸೋಇಚ್ಛೆ ಥಳಿಸಿ ಅವರ ಮೊಮ್ಮಗಳನ್ನು ಅಪಹರಿಸಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಘುಂಗ್ಚಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಉದ್ರಾಹ್ ಗ್ರಾಮದಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ 70 ವರ್ಷದ ಫೂಲ್ಚಂದ್ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪಿಲಿಭಿತ್ ಪೊಲೀಸ್ ವರಿಷ್ಠಾಧಿಕಾರಿ ಅವಿನಾಶ್ ಪಾಂಡೆ ತಿಳಿಸಿದ್ದಾರೆ.

ಘಟನೆ ಸಂಬಂಧ ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಇತರೆ ಆರೋಪಿಗಳಿಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.