ನವದೆಹಲಿ: ಸಂಸತ್ ಅಧಿವೇಶನಕ್ಕೆ ಕೆಲ ಗಂಟೆಗಳು ಬಾಕಿ ಇರುವಾಗಲೇ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಈ ಕುರಿತು ಭಾನುವಾರ ತಡರಾತ್ರಿ ಟ್ವೀಟ್ ಮಾಡಿರುವ ಅವರು, ‘ಇಂದು ನನಗೆ ಕೋವಿಡ್ ಇರುವುದು ದೃಢಪಟ್ಟಿದೆ. ನಾನೀಗ ವೈದ್ಯರ ಆರೈಕೆಯಲ್ಲಿದ್ದೇನೆ. ಕಳೆದ 2 ದಿನಗಳಿಂದ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ಜಾಗರೂಕರಾಗಿರಿ. ಅಗತ್ಯವಿದ್ದರೆ ಪರೀಕ್ಷೆಗೆ ಒಳಗಾಗಿ. ನಿಮ್ಮ ಆರೋಗ್ಯಕ್ಕಾಗಿ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ತಿಳಿಸಿದ್ದಾರೆ.

ಬಜೆಟ್ ಅಧಿವೇಶನದ ಮೊದಲಾರ್ಧವು ಜನವರಿ 31 ರಿಂದ ಫೆಬ್ರುವರಿ 11ರ ವರೆಗೆ ನಡೆಯುತ್ತದೆ. ಮಾರ್ಚ್ 14 ರಂದು ಮತ್ತೆ ಆರಂಭವಾಗಲಿರುವ ಅಧಿವೇಶನ ಏಪ್ರಿಲ್ 8 ರವರೆಗೆ ನಡೆಯಲಿದೆ. ಫೆಬ್ರುವರಿ 1ರಂದು ಸರ್ಕಾರವು 2022-23 ನೇ ಸಾಲಿನ ಬಜೆಟ್ ಮಂಡಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.