ನವದೆಹಲಿ: ಅಸ್ಸಾಂ ಮತ್ತು ಮಧ್ಯಪ್ರದೇಶದಿಂದ ರಾಜ್ಯಸಭೆಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಕೇಂದ್ರ ಸಚಿವರಾದ ಸರ್ವಾನಂದ ಸೋನೊವಾಲ್ ಮತ್ತು ಎಲ್.ಮುರುಗನ್ ಅವರನ್ನು ಅಭ್ಯರ್ಥಿ ಗಳನ್ನಾಗಿ ಘೋಷಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಈ ಇಬ್ಬರು ನಾಯಕರನ್ನು ಇತ್ತೀಚೆಗಷ್ಟೇ ತಮ್ಮ ಸಚಿವ ಸಂಪುಟಕ್ಕೆ ಸೇರಿಸಿಕೊಂಡಿದ್ದರು. ಈ ಇಬ್ಬರನ್ನೂ ರಾಜ್ಯಸಭೆಗೆ ಆಯ್ಕೆ ಮಾಡಲು ಆರು ತಿಂಗಳೊಳಗೆ ಚುನಾವಣೆ ನಡೆಸುವುದು ಅಗತ್ಯವಾಗಿತ್ತು.

ಓದಿ:ಕುದುರೆಗೆ ನೀರು ಕುಡಿಸುವುದು ಹೇಗೆ: ಮೋದಿ ಬಗ್ಗೆ ಸುಬ್ರಮಣಿಯನ್ ಸ್ವಾಮಿ ಟ್ವೀಟ್

ಅಸ್ಸಾಂನಲ್ಲಿ ವಿಶ್ವಜಿತ್ ಡೈಮುರಿಯವರು ವಿಧಾನಸಭಾ ಅಧ್ಯಕ್ಷರಾಗಿ ನೇಮಕಗೊಂಡ ನಂತರ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮಧ್ಯಪ್ರದೇಶದಲ್ಲಿ ತಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕದ ರಾಜ್ಯಪಾಲರಾಗಿ ನೇಮಗೊಂಡ ನಂತರ, ತನ್ನ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇಬ್ಬರು ನಾಯಕರ ರಾಜೀನಾಮೆಯಿಂದ ತೆರವಾದ ರಾಜ್ಯಸಭಾ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ. ಈ ಎರಡೂ ರಾಜ್ಯಗಳ ವಿಧಾನಸಭೆಯಲ್ಲಿ ಬಿಜೆಪಿ ಬಹುಮತವಿರುವ ಕಾರಣ, ರಾಜ್ಯಸಭೆಗೆ ಇಬ್ಬರು ನಾಯಕರ ಆಯ್ಕೆ ಖಚಿತವಾಗಿದೆ.

ಓದಿ:ಮಹಾರಾಷ್ಟ್ರ ರಾಜಕೀಯ: ಬಿಜೆಪಿ–ಸೇನಾ ಮೈತ್ರಿ ಬಗ್ಗೆ ಚಿಗುರೊಡೆದ ‘ಹೇಳಿಕೆಗಳು’

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.