ಹೈದರಾಬಾದ್: 'ದೇಶದಾದ್ಯಂತ ಕುಟುಂಬ ಆಧರಿತ ಪಕ್ಷಗಳ ನಡುವೆ ರಾಷ್ಟ್ರೀಯ ಪಕ್ಷವಾಗಿ ಹೋರಾಡುತ್ತಿರುವ ಏಕೈಕ ಪಕ್ಷ ಬಿಜೆಪಿ. ಅದು ಬಲಿಷ್ಠ ರಾಷ್ಟ್ರಕ್ಕಾಗಿ ಪ್ರತಿ ರಾಜ್ಯದಲ್ಲೂ ಶ್ರಮಿಸುತ್ತಿದೆ' ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹೇಳಿದರು.

ಇಂದು ನಗರದ ಹೊರವಲಯದಲ್ಲಿ ಬಿಜೆಪಿಯ ತೆಲಂಗಾಣ ಘಟಕದ ರಾಜ್ಯ ಕೌನ್ಸಿಲ್ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಪ್ರತಿಯೊಬ್ಬ ಮತದಾರನ ಬಳಿ ತೆರಳಿ ಮೋದಿ ಸರ್ಕಾರದ ಸಾಧನೆಗಳನ್ನು ತಲುಪಿಸುವಂತೆ ಪಕ್ಷದ ಮುಖಂಡರಿಗೆ ಸೂಚನೆ ನೀಡಿದರು.

ಉದಾಹರಣೆಗಳನ್ನು ಉಲ್ಲೇಖಿಸಿದ ನಡ್ಡಾ, 'ಪ್ರಾದೇಶಿಕ ಪಕ್ಷಗಳು ಕುಟುಂಬ ಪಕ್ಷಗಳಾಗಿ ಪರಿವರ್ತನೆಗೊಂಡಿವೆ. ಆದರೆ ಸದ್ಯ ರಾಷ್ಟ್ರೀಯ ಪಕ್ಷವಾಗಿ ಹೋರಾಡುತ್ತಿರುವ ಏಕೈಕ ರಾಜಕೀಯ ಪಕ್ಷವೆಂದರೆ ಅದು ಭಾರತೀಯ ಜನತಾ ಪಕ್ಷ. ಮುಂದಿನ ದಿನಗಳಲ್ಲಿ ಪ್ರತಿ ರಾಜ್ಯದಲ್ಲೂ ಬಿಜೆಪಿಯ ಸಿದ್ದಾಂತವನ್ನು ಜನರು ಒಪ್ಪಿ ನಮಗೆ ಮತ ಹಾಕಲಿದ್ದಾರೆ. ಅದರಲ್ಲಿ ಯಾವುದೇ ಸಂಶಯ ಬೇಡ' ಎಂದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಮತ್ತು ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ. ಕಿಶನ್ ರೆಡ್ಡಿ ಮತ್ತು ಇತರ ಹಿರಿಯ ನಾಯಕರು ಉಪಸ್ಥಿತರಿದ್ದರು.
.ಕುಟುಂಬ ಆಧರಿತ ಪಕ್ಷ ದೇಶದ ದೊಡ್ಡ ಶತ್ರು: ಪ್ರಧಾನಿ ಮೋದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.