ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ಮೇಲೆ ದ್ವೇಷವನ್ನು ಹೊಂದಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಬಿಡುಗಡೆಗೊಳಿಸಿರುವ ಪ್ರಣಾಳಿಕೆಯಲ್ಲಿ ‘ಅಲ್ಪಸಂಖ್ಯಾತರು’ ಎಂಬ ಪದವನ್ನು ನಮೂದಿಸಲು ಸಹ ಪಕ್ಷ ನಿರಾಕರಿಸಿದ್ದು, ಹಿಂದುಳಿದ ವರ್ಗಗಳು ಎಂದು ಕರೆದಿದೆ ಎಂದು ಅವರು ಕಿಡಿಕಾರಿದ್ದಾರೆ.

ಉತ್ತರ ಪ್ರದೇಶದಲ್ಲಿ ಅನುಪ್ರಿಯಾ ಪಟೇಲ್ ಅವರ ಅಪ್ನಾ ದಳ (ಕೆ) ಜತೆಗಿನ ಎಐಎಂಐಎಂ ಮೈತ್ರಿಯು ವಿಧಾನಸಭೆ ಚುನಾವಣೆಯಲ್ಲಿಯೂ ಮುಂದುವರಿಯಲಿದೆ. ಮಹಾರಾಷ್ಟ್ರ ಅಕೋಲಾದಲ್ಲಿ ಪ್ರಕಾಶ್ ಅಂಬೇಡ್ಕರ್ ಮತ್ತು ಅಮರಾವತಿಯಲ್ಲಿ ಆನಂದ್ ಅಂಬೇಡ್ಕರ್ ಅವರನ್ನು ಪಕ್ಷ ಬೆಂಬಲಿಸಲಿದೆ ಎಂದು ಓವೈಸಿ ಹೇಳಿದ್ದಾರೆ.

‘ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದ ಬಿಜೆಪಿ ಪ್ರಣಾಳಿಕೆಯ ಜಾಹೀರಾತನ್ನು ನೋಡಿದೆ. ಅದರಲ್ಲಿ ಹೊಸ ಉದ್ಯಮವನ್ನು ಪ್ರಾರಂಭಿಸಲು ಸರ್ಕಾರದ ಕಡೆಯಿಂದ ಸಾಲ ಅಥವಾ ಸಹಾಯ ಮಾಡುವ ಕುರಿತು ಬಿಜೆಪಿ ತಿಳಿಸಿದೆ. ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವುದಾಗಿ ಪಕ್ಷ ಹೇಳಿದೆ. ಆದರೆ, ಅದರಲ್ಲಿ ಪರಿಶಿಷ್ಟ ಪಂಗಡ ಮತ್ತು ಒಬಿಸಿ ಎಂದು ನಮೂದಿಸಲಾಗಿದೆ. ಅಲ್ಪಸಂಖ್ಯಾತರು ಎಂಬ ಪದವನ್ನು ಉಲ್ಲೇಖಿಸಲು ಬಿಜೆಪಿ ನಿರಾಕರಿಸಿದೆ. ಭಾರತದ ಸಂವಿಧಾನದಲ್ಲಿಯೇ ಅಲ್ಪಸಂಖ್ಯಾತರು ಎಂಬ ಪದವನ್ನು ಉಲ್ಲೇಖಿಸಲಾಗಿದೆ. ಆದರೆ ಬಿಜೆಪಿ ಈ ಪದದ ಬಗ್ಗೆ ಅಪಾರ ದ್ವೇಷವನ್ನು ಹೊಂದಿದೆ’ ಎಂದು ಓವೈಸಿ ತಿಳಿಸಿದ್ದಾರೆ.

‘ಉದ್ಯೋಗ ಕೊರತೆಯಿಂದ ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚುತ್ತಿದೆ, ಅಲ್ಪಸಂಖ್ಯಾತರ ಮೇಲಿನ ದ್ವೇಷವೂ ಅಧಿಕಗೊಳ್ಳುತ್ತಿದೆ. ಇದರಿಂದಾಗಿ ದೇಶದ ಸಂವಿಧಾನಕ್ಕೆ ತೊಡಕಾಗಲಿದೆ. ಆದ್ದರಿಂದ ಯಾವುದೇ ಪಕ್ಷಕ್ಕೆ ಮತ ಹಾಕುವ ಮೊದಲು ಜನರು ಈ ಎಲ್ಲ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

ದೇಶವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡುತ್ತೇವೆ ಎಂದು ಬಿಜೆಪಿ ಹೇಳುತ್ತದೆ. ಆದರೆ, ಅಭಿವೃದ್ಧಿಯ ವಿಷಯಕ್ಕೆ ಬಂದಾಗ ತಲಾ ಆದಾಯವನ್ನು ಪರಿಗಣಿಸಬೇಕು ಎಂದು ಓವೈಸಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.