ಹೈದರಾಭಾದ್: ತೆಲಂಗಾಣ ಶಾಸಕ ಟಿ ರಾಜಾ ಸಿಂಗ್ ಅವರ ಅಮಾನತು ಕ್ರಮವನ್ನು ಬಿಜೆಪಿ ಶಿಸ್ತು ಸಮಿತಿ ಭಾನುವಾರ ಹಿಂಪಡೆದಿದೆ.

2022ರ ಆಗಸ್ಟ್ನಲ್ಲಿ ಅವರನ್ನು ಬಿಜೆಪಿ ಅಮಾನತುಗೊಳಿಸಿತ್ತು. ಪ್ರವಾದಿ ಮಹಮ್ಮದ್‌ರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಬಿಜೆಪಿ ಪಕ್ಷ ಈ ಕ್ರಮಕೈಗೊಂಡಿತ್ತು.

ಇದಕ್ಕಾಗಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬಿಜೆಪಿಯ ಉನ್ನತ ನಾಯಕರಿಗೆ ರಾಜಾ ಸಿಂಗ್ ಧನ್ಯವಾದ ಅರ್ಪಿಸಿದ್ದಾರೆ

ಶಾಸಕ ಟಿ ರಾಜಾ ಸಿಂಗ್ ಅವರಿಗೆ ಹೈದರಾಬಾದ್‌ನಲ್ಲಿ ಬಿಜೆಪಿ ಟಿಕೆಟ್ ನೀಡಲಿದೆ. ತೆಲಂಗಾಣ ಬಿಜೆಪಿಯಲ್ಲಿ ರಾಜಾ ಸಿಂಗ್ ‘ಫೈರ್ ಬ್ರ್ಯಾಂಡ್‘ ಎಂದೇ ಖ್ಯಾತಿಯಾಗಿದ್ದಾರೆ.

ಈ ಸಲದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಆರ್‌ಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪೈಪೋಟಿ ಇರಲಿದೆ. ಬಿಜೆಪಿ ಮೂರನೇ ಸ್ಥಾನದಲ್ಲಿರಲಿದೆ ಎಂದು ಸಮೀಕ್ಷೆಗಳು ಹೇಳಿವೆ.

ತೆಲಂಗಾಣದಲ್ಲಿ ನವೆಂಬರ್ 30 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.