ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

BJP ಆಡಳಿತವಿರುವ ರಾಜ್ಯಗಳು ಪ್ರತಿಯೊಬ್ಬ ನಾಗರಿಕರ ಕಲ್ಯಾಣಕ್ಕೆ ಬದ್ಧ: ಅಮಿತ್ ಶಾ

Published : 28 ಜುಲೈ 2024, 3:26 IST
Last Updated : 28 ಜುಲೈ 2024, 3:26 IST
ಫಾಲೋ ಮಾಡಿ
Comments

ನವದೆಹಲಿ: ಬಿಜೆಪಿ ಆಡಳಿತವಿರುವ ರಾಜ್ಯಗಳು ‘ಅಂತ್ಯೋದಯ’ ತತ್ವದಿಂದ ನಡೆಸಲ್ಪಡುತ್ತವೆ ಮತ್ತು ರಾಜ್ಯದ ಪ್ರತಿಯೊಬ್ಬ ನಾಗರಿಕರ ಕಲ್ಯಾಣಕ್ಕೆ ಬದ್ಧವಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಸಭೆಯಲ್ಲಿ ಭಾಗವಹಿಸಿದೆ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳು ‘ಅಂತ್ಯೋದಯ’ ತತ್ವದ ಮೇಲೆ ನಡೆಸಲ್ಪಡುತ್ತವೆ ಮತ್ತು ರಾಜ್ಯದ ಪ್ರತಿಯೊಬ್ಬ ನಾಗರಿಕರ ಕಲ್ಯಾಣಕ್ಕೆ ಬದ್ಧವಾಗಿವೆ‘ ಎಂದು ಹೇಳಿದ್ದಾರೆ.

ಸಭೆಯಲ್ಲಿ ಹಲವು ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಮತ್ತು ಉಪಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಚರ್ಚಿಸಿದರು. ಹಲವು ಕಲ್ಯಾಣ ಯೋಜನೆಗಳು ಉದ್ದೇಶಿತ ಫಲಾನುಭವಿಗಳನ್ನು ತಲುಪುತ್ತಿದೆಯೇ ಎಂಬುದರ ಬಗ್ಗೆ ಗಮನಹರಿಸಲಾಯಿತು. ಸಮಾಜದ ವಿವಿಧ ವರ್ಗಗಳಿಗೆ ವಿಶೇಷವಾಗಿ ಬಡವರಿಗೆ ಸಹಾಯ ಮಾಡಲು ಬಿಜೆಪಿ ನೇತೃತ್ವದ ಸರ್ಕಾರಗಳ ಪ್ರಯತ್ನಗಳ ಕುರಿತು ಮೋದಿ ಸಮಾಲೋಚನೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

‘ನಮ್ಮ ಪಕ್ಷವು ಮತ್ತಷ್ಟು ಉತ್ತಮ ಆಡಳಿತ ನೀಡಲು ಹಾಗೂ ಜನರ ಆಶೋತ್ತರಗಳನ್ನು ಈಡೇರಿಸಲು ಅವಿರತವಾಗಿ ಶ್ರಮಿಸುತ್ತಿದೆ’ ಎಂದು ಮೋದಿ ಹೇಳಿದ್ದಾರೆ.

'ಮುಖ್ಯಮಂತ್ರಿ ಪರಿಷತ್' ಸಭೆಯನ್ನು ಬಿಜೆಪಿ ಆಯೋಜಿಸಿದೆ. ಕೇಂದ್ರ ಹಾಗೂ ರಾಜ್ಯಗಳ ನಡುವಣ ಸಮನ್ವಯ ಹಾಗೂ ಉತ್ತಮ ಆಡಳಿತ ಕಾರ್ಯಸೂಚಿಯ ಭಾಗವಾಗಿ ನಿಯಮಿತವಾಗಿ ಸಭೆಯನ್ನು ಆಯೋಜಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆಯ ಫಲಿತಾಂಶ ಹಾಗೂ ಕೇಂದ್ರ ಬಜೆಟ್ ಬಳಿಕ ನಡೆದ ಬಿಜೆಪಿ ಸಿಎಂಗಳ ಮೊದಲ ಸಭೆ ಇದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT