ನವದೆಹಲಿ: ‘ಸಂಬಿತ್ ಪಾತ್ರಾ ಅವರ ಟ್ವೀಟ್‌ನಲ್ಲಿ ಮಾಡಿರುವ ‘ತಿರುಚಲಾದ ಮಾಹಿತಿ’ ಟ್ಯಾಗ್ ಅನ್ನು ತೆಗೆಯಿರಿ’ ಎಂದು ಕೇಂದ್ರ ಸರ್ಕಾರವು ಟ್ವಿಟರ್‌ಗೆ ಸೂಚನೆ ನೀಡಿದೆ ಎಂದು ಮೂಲಗಳು ಹೇಳಿವೆ.

ಪಾತ್ರಾ ಅವರ ಟ್ವೀಟ್ ಅನ್ನು ಟ್ಯಾಗ್ ಮಾಡಿದ್ದು ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ಕೇಂದ್ರ ಸರ್ಕಾರ ಈ ಕ್ರಮ ತೆಗದುಕೊಂಡಿದೆ ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ‘ಟೂಲ್‌ಕಿಟ್’ ಸಿದ್ಧಪಡಿಸಿದೆ ಎಂದು ಆರೋಪಿಸಿ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ, ಟ್ವೀಟ್ ಮೂಲಕ ಹಂಚಿಕೊಂಡಿರುವ ಮಾಹಿತಿಗೆ ‘ತಿರುಚಿದ ಮಾಧ್ಯಮ’ ಎಂಬುದಾಗಿ ಟ್ವಿಟರ್ ಗುರುತು ಹಾಕಿತ್ತು.

ಓದಿ:ಕಾಂಗ್ರೆಸ್ ಟೂಲ್‌ಕಿಟ್: ಸಂಬಿತ್ ಪಾತ್ರ ಟ್ವೀಟ್ ತಿರುಚಿದ್ದು ಎಂದ ಟ್ವಿಟರ್

‘ಟೂಲ್‌ಕಿಟ್‌ಗೆ ಸಂಬಂಧಿಸಿದ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ತನಿಖಾ ಸಂಸ್ಥೆಗಳು ಇನ್ನೂ ತನಿಖೆ ನಡೆಸುತ್ತಿವೆ. ಮಾಹಿತಿ ಸತ್ಯವೇ ಅಥವಾ ತಿರುಚಲಾಗಿದೆಯೇ ಎಂಬುದನ್ನು ತನಿಖಾ ಸಂಸ್ಥೆಗಳು ನಿರ್ಧರಿಸಲಿವೆ. ಅದು ತಿರುಚಲಾದ ಮಾಹಿತಿ ಎಂದು ಟ್ವಿಟರ್ ತೀರ್ಪು ನೀಡುವುದು ಸಾಧ್ಯವಿಲ್ಲ’ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯವು ಟ್ವಿಟರ್‌ಗೆ ಪತ್ರ ಬರೆದಿದೆ ಎನ್ನಲಾಗಿದೆ.

ಸರ್ಕಾರ ಈ ಪತ್ರ ಬರೆದ ನಂತರ ಹಲವು ಗಂಟೆಗಳು ಕಳೆದರೂ, ಟ್ವಿಟರ್ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಪಾತ್ರಾ ಅವರ ಟ್ವೀಟ್‌ನಲ್ಲಿ, ‘ತಿರುಚಲಾದ ಮಾಹಿತಿ’ ಎಂಬ ಟ್ಯಾಗ್ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.