ನವದೆಹಲಿ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿರುವುದನ್ನು ತೃಣಮೂಲ ಕಾಂಗ್ರೆಸ್ ಶುಕ್ರವಾರ ಖಂಡಿಸಿದೆ.

ಸಿಬಿಐ ದಾಳಿಯು ಪ್ರತಿಪಕ್ಷಗಳನ್ನು ಬೆದರಿಸುವ ತಂತ್ರದ ಭಾಗವಾಗಿದೆ ಎಂದು ಆರೋಪಿಸಿದೆ.

ಈ ವಿಚಾರವಾಗಿ ಹೇಳಿಕೆ ನೀಡಿರುವ ಟಿಎಂಸಿ ಸಂಸದ ಸೌಗತ್ ರಾಯ್, ‘ದಾಳಿಗಳು ಪ್ರತಿಪಕ್ಷಗಳನ್ನು ಬೆದರಿಸುವ ಯತ್ನವಾಗಿದೆ. ಮನೀಶ್ ಸಿಸೋಡಿಯಾ ದೆಹಲಿಯ ಉಪ ಮುಖ್ಯಮಂತ್ರಿಯಾಗಿದ್ದಾರೆ. ಕೇಂದ್ರದ ಏಜೆನ್ಸಿಗಳು ತಮ್ಮ ಯಜಮಾನರ ಆದೇಶದ ಮೇರೆಗೆ ಅವರಿಗೆ ಕಿರುಕುಳ ನೀಡಲು ಪ್ರಯತ್ನಿಸುತ್ತಿವೆ’ ಎಂದು ಆರೋಪಿಸಿದ್ದಾರೆ.

ಪ್ರತಿಪಕ್ಷಗಳ ಆಡಳಿತವಿರುವ ಎಲ್ಲ ರಾಜ್ಯಗಳಲ್ಲೂ ಬಿಜೆಪಿ ಇದೇ ಕೆಲಸ ಮಾಡುತ್ತಿದೆ ಎಂದೂ ಟೀಕಿಸಿದ್ದಾರೆ.

ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವ ವಿಚಾರದಲ್ಲಿ ಕೇಂದ್ರ ತನಿಖಾ ಸಂಸ್ಥೆಗಳು ಮೌನವಾಗಿವೆ ಎಂದು ಸೇನ್ ವಾಗ್ದಾಳಿ ನಡೆಸಿದ್ದಾರೆ.

ಮನೀಶ್ ಸಿಸೋಡಿಯಾ ಅವರ ಮನೆ ಸಹಿತ ದೆಹಲಿ ಎನ್‌ಸಿಆರ್‌ನ 21 ಸ್ಥಳಗಳಲ್ಲಿ ದಾಳಿ ನಡೆಸಿರುವ ಸಿಬಿಐ, ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ಸಿಬಿಐ ದಾಳಿಯನ್ನು ಸ್ವಾಗತಿಸಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ 15 ಜನರನ್ನು ಸಿಬಿಐ ಆರೋಪಿಗಳೆಂದು ಹೆಸರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.