ನವದೆಹಲಿ: ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು 'ಎಬಿಪಿ ನ್ಯೂಸ್-ಸಿ ವೋಟರ್' ಸಮೀಕ್ಷೆ ವರದಿ ತಿಳಿಸಿದೆ.

ಈ ಕುರಿತು ಸುದ್ದಿ ಸಂಸ್ಥೆ 'ಐಎಎನ್ಎಸ್' ವರದಿ ಮಾಡಿದೆ. ಆದರೆ ಕಳೆದ ಚುನಾವಣೆಗೆ ಹೋಲಿಸಿದಾಗ ಬಿಜೆಪಿ ಬಹುಮತದಲ್ಲಿ ಭಾರಿ ಇಳಿಕೆ ಕಂಡುಬರಲಿದೆ ಎಂದು ಹೇಳಿದೆ.

ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಹಾಗೂ ಸಮಾಜವಾದಿ ಪಕ್ಷದ (ಎಸ್ಪಿ) ನಡುವೆ ತೀವ್ರ ಪೈಪೋಟಿ ಏರ್ಪಡಲಿದೆ. ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ಹಾಗೂ ಕಾಂಗ್ರೆಸ್ಗೆ ಹಿನ್ನಡೆ ಎದುರಾಗಲಿದೆ ಎಂದು ತಿಳಿಸಿದೆ.

403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರ ಪಕ್ಷಗಳು 212ರಿಂದ 224 ಸೀಟುಗಳನ್ನು ಗೆಲ್ಲಲಿವೆ. ಆದರೂ ಕಳೆದ ಬಾರಿಗೆ (325 ಸೀಟು) ಹೋಲಿಸಿದಾಗ ಸುಮಾರು 100 ಸೀಟುಗಳ ಇಳಿಕೆ ಕಂಡುಬರಲಿದೆ. ಸಮಾಜವಾದಿ ಪಕ್ಷವು 151ರಿಂದ 163 ಸೀಟು ಪಡೆಯಲಿದೆ ಎಂದು ಸಮೀಕ್ಷೆಯು ತಿಳಿಸಿದೆ.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಸಮೀಕ್ಷೆಯಲ್ಲಿ ಭಾಗವಹಿಸಿದ ಶೇ. 41ರಷ್ಟು ಮಂದಿ ಅಭಿಪ್ರಾಯಪಟ್ಟಿದ್ದಾರೆ.

18 ವರ್ಷಕ್ಕೂ ಮೇಲ್ಪಟ್ಟ ಮತದಾರರಲ್ಲಿ ನವೆಂಬರ್ 13ರಿಂದ ಡಿಸೆಂಬರ್ 9ರ ವರೆಗೆ ನಡೆಸಿದ ಸಮೀಕ್ಷೆಯಲ್ಲಿ ಈ ಅಂಕಿಅಂಶ ಬಯಲಾಗಿದೆ. ಪಂಚ ರಾಜ್ಯಗಳಲ್ಲಿ (ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಮಣಿಪುರ ಮತ್ತು ಗೋವಾ) ಸಮೀಕ್ಷೆಯನ್ನು ಹಮ್ಮಿಕೊಳ್ಳಲಾಗಿತ್ತು.

ಸಮೀಕ್ಷೆಯ ಪ್ರಕಾರ, ಬಿಜೆಪಿ ಹಾಗೂ ಮಿತ್ರ ಪಕ್ಷಗಳು ಶೇಕಡಾ 40.4ರಷ್ಟು ಮತಗಳನ್ನು ಪಡೆದುಕೊಳ್ಳುವ ನಿರೀಕ್ಷೆಯಿದೆ. 2017ರಲ್ಲಿ ಇದು 41.4 ಆಗಿತ್ತು. ಅತ್ತ ಸಮಾಜವಾದಿ ಪಕ್ಷವು 2017ಕ್ಕಿಂತ (ಶೇ. 23.6) ಶೇ.10 ಹೆಚ್ಚು ಮತಗಳನ್ನು ಪಡೆಯುವ ನಿರೀಕ್ಷೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.