ಚಂಡೀಗಢ: ‘ಶಿರೋಮಣಿ ಅಕಾಲಿ ದಳದ (ಎಸ್ಎಡಿ) ಜೊತೆಗೆ ಯಾವುದೇ ಕಾರಣಕ್ಕೂ ಮತ್ತೊಮ್ಮೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ’ ಎಂದು ಬಿಜೆಪಿ ಪಂಜಾಬ್ ಘಟಕದ ಅಧ್ಯಕ್ಷ ಅಶ್ವನಿ ಶರ್ಮಾ ಶನಿವಾರ ಹೇಳಿದ್ದಾರೆ.

ರಾಜ್ಯದ ಎಲ್ಲಾ ಚುನಾವಣೆಗಳಲ್ಲೂ ಪಕ್ಷವು ಸ್ಪರ್ಧಿಸಲಿದೆ ಎಂದೂ ಅವರು ತಿಳಿಸಿದ್ದಾರೆ.

ಈಚೆಗೆ ನಿಧನರಾದ ಎಸ್ಎಡಿ ವರಿಷ್ಠ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕತ್ವವು ಗೌರವ ಸಲ್ಲಿಸಿರುವುದಕ್ಕೆ ರಾಜಕೀಯ ತಳುಕು ಹಾಕಬೇಡಿ ಎಂದಿದ್ದಾರೆ.

ಮೋದಿ ಅವರು ಈಚೆಗೆ ಚಂಡೀಗಢದಲ್ಲಿರುವ ಎಸ್ಎಡಿ ಕಚೇರಿಗೆ ಭೇಟಿ ನೀಡಿ, ಪ್ರಕಾಶ್ ಸಿಂಗ್ ಬಾದಲ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತಿತರರೂ ಬಾದಲ್ ಅವರ ಸ್ವಗ್ರಾಮಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.