ಚಂಡೀಗಢ: ಬಿಜೆಪಿ ನಾಯಕ ಮತ್ತು ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿರುವ ಸುದ್ದಿಯನ್ನು ಶನಿವಾರ ತಳ್ಳಿಹಾಕಿದ್ದು, ‘ಇದು ಆಧಾರ ರಹಿತ’ ಎಂದು ಹೇಳಿದ್ದಾರೆ.

‘ಸಾಮಾಜಿಕ ಮಾಧ್ಯಮಗಳಲ್ಲಿ ತೋರಿಸಿರುವುದರಲ್ಲಿ ಯಾವುದೇ ಸತ್ಯಾಂಶವಿಲ್ಲ. ತಾನು ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ನಿಷ್ಠನಾಗಿದ್ದೇನೆ. ಒಮ್ಮೆ ಬಿಜೆಪಿ ಜತೆಗೆ ನಿಷ್ಠನಾಗಿರಲು ಮನಸು ಮಾಡಿದ ಮೇಲೆ ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ನನ್ನ ನಿಷ್ಠೆ ಯಾವಾಗಲೂ ಬಿಜೆಪಿ ಜತೆಗೆ ಇರಲಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.

‘ಒಂದು ಸಲ ನಿರ್ಧಾರ ತೆಗೆದುಕೊಂಡರೆ ಅದನ್ನು ಬದಲಿಸದೇ ಅದಕ್ಕೆ ಅಂಟಿಕೊಂಡಿರುವುದು ನನ್ನ ಜಾಯಮಾನ. ಒಂದು ಹಂತಕ್ಕೆ ಮುಟ್ಟಿದ ಮೇಲೆ ತಿರುಗಿ ನೋಡಲಾಗದು’ ಎಂದು ಅಮರಿಂದರ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.