ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೇರಳದಲ್ಲಿ ಬಿಜೆಪಿಯ ಕೋಮುವಾದಿ ರಾಜಕಾರಣ ಬೇರೂರಲು ಬಿಡುವುದಿಲ್ಲ: ವಿಜಯನ್

Published 6 ಏಪ್ರಿಲ್ 2024, 9:56 IST
Last Updated 6 ಏಪ್ರಿಲ್ 2024, 9:56 IST
ಅಕ್ಷರ ಗಾತ್ರ

ಆಲಪ್ಪುಳ( ಕೇರಳ): ರಾಜ್ಯದಲ್ಲಿ ಬಿಜೆಪಿಯ ಕೋಮುವಾದಿ ರಾಜಕಾರಣವನ್ನು ಬೇರೂರಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ರಾಜ್ಯದಲ್ಲಿ ಬಿಜೆಪಿಯು ಒಂದೇ ಒಂದು ಸ್ಥಾನವನ್ನೂ ಗೆಲ್ಲುವುದಿಲ್ಲ ಹಾಗೂ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಉದ್ದೇಶದಿಂದಲೇ ಈ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇವೆ ಎಂದರು.

ಈ ಚುನಾವಣೆ ದೇಶದ ಭವಿಷ್ಯವನ್ನು ನಿರ್ಧರಿಸಲಿದೆ. ದೇಶದಲ್ಲಿ ಅಪಾಯಕಾರಿ ನೀತಿಗಳನ್ನು ಜಾರಿಗೊಳಿಸುತ್ತಿರುವ ಬಿಜೆಪಿ ಪಕ್ಷವನ್ನು ಬೇರು ಸಮೇತ ಕಿತ್ತೊಗೆಯಲು ಮತ ಕೇಳುತ್ತಿದ್ದೇವೆ. ರಾಷ್ಟ್ರೀಯ ಮಟ್ಟದಲ್ಲಿಯೂ ಬಿಜೆಪಿ ವಿರೋಧಿ ರಂಗದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದೇವೆ ಎಂದು ವಿಜಯನ್ ತಿಳಿಸಿದ್ದಾರೆ.

ಕೋಮುವಾದಿ ಧೋರಣೆಗಳ ವಿರುದ್ಧ ಹೋರಾಡಿದ ಇತಿಹಾಸ ಎಡಪಕ್ಷಗಳಿಗೆ ಇದೆ. ‘ಕೆಲವು ಮತಗಳಿಗಾಗಿ ನಾವು ನಮ್ಮ ರಾಜಕೀಯವನ್ನು ಬದಲಾಯಿಸುವುದಿಲ್ಲ’ ಎಂದು ವಿಜಯನ್ ಹೇಳಿದ್ದಾರೆ.

ಕೇರಳದ 20 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಹೊರಬೀಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT