ನವದೆಹಲಿ: ಕೇಂದ್ರದ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಕಾನೂನು ವಿದ್ಯಾರ್ಥಿನಿ ಬಂಧನವನ್ನು ಖಂಡಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ‘ಇದು, ಬಿಜೆಪಿ ನ್ಯಾಯ’ ಎಂದು ಟೀಕಿಸಿದ್ದಾರೆ.

ಚಿನ್ಮಯಾನಂದ ಅವರಿಂದ ಹಣ ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇಲೆ ಕಾನೂನು ವಿದ್ಯಾರ್ಥಿನಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜಾಮೀನು ಮನವಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಸದ್ಯ ಆಕೆ 14 ದಿನ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.

ಇದನ್ನೂ ಓದಿ:ಬಿಜೆಪಿ ನಾಯಕ ಚಿನ್ಮಯಾನಂದ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ವಿದ್ಯಾರ್ಥಿನಿ ಬಂಧನ

ಉನ್ನಾವೊ ಮತ್ತು ಶಹಜಹಾಂಪುರ ಅತ್ಯಾಚಾರ ಪ್ರಕರಣಗಳನ್ನು ಪರಸ್ಪರ ಹೋಲಿಕೆ ಮಾಡಿರುವ ಪ್ರಿಯಾಂಕಾ ಗಾಂಧಿ, ಮೇಲಿನಂತೆ ವ್ಯಂಗ್ಯವಾಗಿ ಪ್ರಶ್ನಿಸಿ ಬುಧವಾರ ಟ್ವೀಟ್ ಮಾಡಿದ್ದಾರೆ.

ಉನ್ನಾವೊ ಪ್ರಕರಣದಲ್ಲಿ ಸಂತ್ರಸ್ತೆ ತಂದೆಯ ಹತ್ಯೆಯಾಯಿತು, ಚಿಕ್ಕಪ್ಪನ ಬಂಧನವಾಯಿತು. ಜನರ ತೀವ್ರ ಪ್ರತಿಭಟನೆಯ ನಂತರ 13 ತಿಂಗಳ ಬಳಿಕ ಆರೋಪಿ ಶಾಸಕನ ಬಂಧನವಾಯಿತು. ಸಂತ್ರಸ್ತೆಯ ಕುಟುಂಬವನ್ನೇ ಕೊಲ್ಲಲೆತ್ನಿಸಲಾಯಿತು. ಈಗ ಶಹಜಹಾಂಪುರ ಪ್ರಕರಣದಲ್ಲಿ ಸಂತ್ರಸ್ತೆಯನ್ನೇ ಬಂಧಿಸಲಾಗಿದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ:ಚಿನ್ಮಯಾನಂದ ಪ್ರಕರಣ ಕೈ ಬಿಡುವುದಕ್ಕಾಗಿ ಒತ್ತಡ ಹೇರಲಾಗುತ್ತಿದೆ:ಸಂತ್ರಸ್ತೆಯ ಅಪ್ಪ

ಈ ಪ್ರಕಣದಲ್ಲಿ ಆರೋಪಿಯಾದ ಬಿಜೆಪಿ ನಾಯಕನ ಮೇಲೆ ಅತ್ಯಾಚಾರ ಆರೋಪದ ಪ್ರಕರಣವನ್ನೂ ದಾಖಲಿಸಿಲ್ಲ. ಇದು, ಬಿಜೆಪಿಯ ನ್ಯಾಯ ಎಂದು ಹೇಳಿದ್ದಾರೆ. ಚಿನ್ಮಯಾನಂದ ಸದ್ಯ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಅವರ ವಿರುದ್ಧ ಐಪಿಸಿ ಸೆಕ್ಷನ್ 376ಸಿ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಇದರ ಶಿಕ್ಷೆ ಪ್ರಮಾಣ ಅತ್ಯಾಚಾರ ಪ್ರಮಾಣಕ್ಕಿಂತಲೂ ಕಡಿಮೆಯದ್ದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.