ನವದೆಹಲಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾವು ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ‘ಸೂಫಿ ಸಂವಾದ’ ಕಾರ್ಯಕ್ರಮ ರೂಪಿಸಿದ್ದು, ಇದಕ್ಕೆ ಬುಧವಾರ ಇಲ್ಲಿ ಚಾಲನೆ ನೀಡಲಾಗಿದೆ.

ಉತ್ತರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಕೇರಳ ಹಾಗೂ ತೆಲಂಗಾಣ ರಾಜ್ಯಗಳಲ್ಲಿರುವ ಮುಸ್ಲಿಂ ಪ್ರಾಬಲ್ಯದ ಜಿಲ್ಲೆಗಳಲ್ಲಿ ತನ್ನ ಅಸ್ತಿತ್ವ ಭದ್ರಪಡಿಸಿಕೊಳ್ಳುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

‘ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಪಾಸ್ಮಾಂಡಾ, ಸೂಫಿ ಹಾಗೂ ಬೋಹರಾಸ್ ಮುಸ್ಲಿಮರನ್ನು ತಲುಪುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದರು. ಹೀಗಾಗಿ ಈ ಕಾರ್ಯಕ್ರಮ ರೂಪಿಸಲಾಗಿದೆ. ಸೂಫಿ ತತ್ವದಲ್ಲಿ ನಂಬಿಕೆ ಹೊಂದಿರುವ 150 ಮಂದಿಯ ತಂಡವೊಂದನ್ನು ರಚಿಸಲಾಗಿದ್ದು, ಈ ತಂಡ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದೆ’ ಎಂದು ಅಲ್ಪಸಂಖ್ಯಾತ ಮೋರ್ಚಾದ ಮುಖ್ಯಸ್ಥ ಜಮಾಲ್ ಸಿದ್ಧಿಕಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.