ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಲ್ಕತ್ತ | ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: 30 ಅಗ್ನಿ ಶಾಮಕಗಳ ಕಾರ್ಯಾಚರಣೆ

Published 12 ಜುಲೈ 2024, 6:09 IST
Last Updated 12 ಜುಲೈ 2024, 6:09 IST
ಅಕ್ಷರ ಗಾತ್ರ

ಕೋಲ್ಕತ್ತ: ಇಲ್ಲಿನ ದಮ್ ದಮ್ ಪ್ರದೇಶದಲ್ಲಿರುವ ಒಳ‍ಉಡುಪು ತಯಾರಿಕಾ ಘಟಕದಲ್ಲಿ ಶುಕ್ರವಾರ ಮುಂಜಾನೆ ಹಾಗೂ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರ್‌ಬಜಾರ್‌ನ ಜೆಸೋರ್ ರಸ್ತೆಯಲ್ಲಿರುವ ಕಟ್ಟಡದಲ್ಲಿ ಮುಂಜಾನೆ 3ಗಂಟೆಗೆ ಅನಾಹುತ ನಡೆದಿದ್ದು, ಯಾವುದೇ ಸಾವು ನೋವಿನ ವರದಿಯಾಗಿಲ್ಲ.

ಪಕ್ಕದಲ್ಲೇ ಇರುವ ಐಸ್‌ಕ್ರೀಂ ಕಾರ್ಖಾನೆಯಿಂದ ಬೆಂಕಿ ಹರಡಿದೆ ಎಂದು ಶಂಕಿಸಲಾಗಿದೆ. ಬೆಂಕಿ ನಂದಿಸಲು ಸುಮಾರು 30 ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಗ್ನಿ ಶಾಮಕ ಸಿಬ್ಬಂದಿಗೆ ಸ್ಥಳೀಯರು ಕೂಡ ಸಹಾಯ ಮಾಡಿದ್ದು, ಸತತ ಏಳು ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ಹತೋಟಿಗೆ ಬಂದಿದೆ.

‘ಬೆಂಕಿ ಹತ್ತಿಕೊಳ್ಳುವ ಸಾಧನಗಳು ಇದ್ದಿದ್ದರಿಂದ ವೇಗವಾಗಿ ಬೆಂಕಿ ಪಸರಿಸಿದೆ. ಕೆಲವೊಂದು ಸ್ಫೋಟಕಗಳು ಕೂಡ ಕಟ್ಟಡದೊಳಗಿದ್ದವು. ನಮ್ಮ ಸಿಬ್ಬಂದಿ ಅದನ್ನು ನಿಯಂತ್ರಿಸಲು ಕೆಲಸ ಮಾಡುತ್ತಿದ್ದಾರೆ. ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲು ಕೆಲಹೊತ್ತು ಬೇಕಾಗಬಹು. ಬೆಂಕಿ ಅವಘಡಕ್ಕೆ ನಿಖರ ಕಾರಣ ಪತ್ತೆ ಮಾಡಲಾಗುವುದು’ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಸ್ಥಳದಲ್ಲಿ ಹಲವು ಗೋದಾಮುಗಳು ಹಾಗೂ ಉತ್ಪಾದನಾ ಘಟಕಗಳಿದ್ದು, ಬೆಂಕಿ ಹರಡುವುದನ್ನು ತಡೆಯುವುದು ಅಗ್ನಿ ಶಾಮಕ ಸಿಬ್ಬಂದಿಗೆ ಸವಾಲಾಗಿ ಪರಿಣಮಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದೆ. ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT