ಮುಂಬೈ: ಬಿಎಂಡಬ್ಲ್ಯು ಹಿಟ್ ಆ್ಯಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾ ಅವರು ತಮ್ಮನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿದೆ, ತಮ್ಮನ್ನು ತಕ್ಷಣವೇ ಬಂಧಮುಕ್ತಗೊಳಿಸಬೇಕು ಎಂದು ಕೋರಿ ಬಾಂಬೆ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.

ಶಾ ಅವರು ಬಿಎಂಡಬ್ಲ್ಯು ಕಾರನ್ನು ಮುಂಬೈನ ವರ್ಲಿ ಪ್ರದೇಶದಲ್ಲಿ ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದು, ಅದರಲ್ಲಿ ಸಾಗುತ್ತಿದ್ದ ಕಾವೇರಿ ನಖ್ವಾ ಎನ್ನುವವರ ಸಾವಿಗೆ ಕಾರಣರಾದ ಆರೋಪ ಎದುರಿಸುತ್ತಿದ್ದಾರೆ. ಈ ಅಪಘಾತ ಸಂಭವಿಸಿದ ಎರಡು ದಿನಗಳ ನಂತರ ಶಾ ಅವರನ್ನು ಬಂಧಿಸಲಾಗಿದೆ.

ತಮ್ಮನ್ನು ಬಂಧನದಲ್ಲಿ ಇರಿಸಿರುವುದು ಅಕ್ರಮ ಎಂದು ಶಾ ಅವರು ಅರ್ಜಿಯಲ್ಲಿ ಹೇಳಿದ್ದಾರೆ. ಈ ಅರ್ಜಿಯು ಹೈಕೋರ್ಟ್‌ನ ವಿಭಾಗೀಯ ಪೀಠವೊಂದರ ಎದುರು ಬುಧವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಅಪಘಾತ ಸಂಭವಿಸಿದಾಗ ಶಾ ಅವರು ಪಾನಮತ್ತರಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.