ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ರಮೇಶ ಪೋಖ್ರಿಯಾಲ್ ಅವರು ಜೂನ್ 25ರಂದು ಸಾಮಾಜಿಕ ಮಾಧ್ಯಮಗಳ ಮೂಲಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು.

10 ಹಾಗೂ 12ನೇ ತರಗತಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಕೇಳುವ ಪ್ರಶ್ನೆಗಳಿಗೆ ಅವರು ಸಂಜೆ 4ಕ್ಕೆ ಉತ್ತರಿಸುವರು ಎಂದು ಮೂಲಗಳು ಹೇಳಿವೆ.

ಕೋವಿಡ್ ನಂತರದ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆಗಾಗಿ ಅವರು ದೆಹಲಿಯ ಎಐಐಎಂಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

‘ಪರೀಕ್ಷೆಗೆ ಸಂಬಂಧಿಸಿದಂತೆ ಸಾಕಷ್ಟು ಜನ ವಿದ್ಯಾರ್ಥಿಗಳು ತಮ್ಮ ಆತಂಕ ವ್ಯಕ್ತಪಡಿಸಿದ್ದು, ತಮ್ಮ ಪ್ರಶ್ನೆಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಇನ್ನೂ ನಿಮ್ಮ ಪ್ರಶ್ನೆಗಳಿದ್ದರೆ ಟ್ವಿಟರ್, ಫೇಸ್ಬುಕ್ ಅಥವಾ ಇ–ಮೇಲ್ ಮೂಲಕ ನನ್ನ ಗಮನಕ್ಕೆ ತನ್ನಿ’ ಎಂದು ಅವರು ಸರಣಿ ಟ್ವೀಟ್ಗಳ ಮೂಲಕ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.