ಬಿಹಾರ: ಮುಜಫ್ಫರ್ಪುರ ಜಿಲ್ಲೆಯ ಭಾಗಮತಿ ನದಿಯಲ್ಲಿ ದೋಣಿ ಮಗುಚಿ ಕನಿಷ್ಠ 10 ಮಕ್ಕಳು ಕಾಣೆಯಾಗಿರುವ ಘಟನೆ ಗುರುವಾರ ನಡೆದಿದೆ.

ಭಾಗಮತಿ ನದಿಯ ಮಧುಪುರ ಪಟ್ಟಿ ಘಾಟ್ ಬಳಿ ದೋಣಿ ಮುಳುಗಿದೆ. ದೋಣಿಯಲ್ಲಿ ಒಟ್ಟು 30 ಮಕ್ಕಳನ್ನು ಕರೆದೊಯ್ಯಲಾಗುತ್ತಿತ್ತು, ಅವರಲ್ಲಿ 20 ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಕುರಿತು ಮಾತನಾಡಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ‘ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ, ತುರ್ತಾಗಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇನೆ. ಮಕ್ಕಳ ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ನೆರವನ್ನು ರಾಜ್ಯ ಸರ್ಕಾರ ನೀಡಲಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.