ಇಂಫಾಲ್: ಶಸ್ತ್ರಸಜ್ಜಿತ ಬುಡಕಟ್ಟು ಉಗ್ರರು ಜಿರೀಬಾಮ್ ಜಿಲ್ಲೆಯಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಅಪಹರಿಸಿದ ಬೆನ್ನಲೇ ಮೂವರು ಮಹಿಳೆಯರ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮೃತದೇಹಗಳು ಅಪಹರಣಕ್ಕೆ ಒಳಗಾದವರವೇ ಎಂಬುದು ಇನ್ನು ದೃಢಪಟ್ಟಿಲ್ಲ. ಆದಾಗ್ಯೂ ಮೂವರು ಮಕ್ಕಳು ನಾಪತ್ತೆಯಾಗಿದ್ದು ಶೋಧಕಾರ್ಯ ಮುಂದುವರಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಜಿರೀಬಾಮ್ನಿಂದ 50 ಕಿ.ಮೀ ದೂರದಲ್ಲಿ ಶುಕ್ರವಾರ ರಾತ್ರಿ ಮೃತದೇಹಗಳು ಪತ್ತೆಯಾಗಿವೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಬೊರೊಬೆಕ್ರಾದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದ ಬಳಿಕ ಪೊಲೀಸ್ ಠಾಣೆಯ ಆವರಣದಲ್ಲಿದ್ದ ನಿರಾಶ್ರಿತ ಶಿಬಿರದ ಆರು ಮಂದಿಯನ್ನು ಅಪಹರಿಸಲಾಗಿತ್ತು.

ಭದ್ರತಾ ಪಡೆಗಳು ಶೋಧಕಾರ್ಯ ನಡೆಸುತ್ತಿದ್ದು, ಐಜಿ ಹಾಗೂ ಡಿಐಜಿ ಮೇಲುಸ್ತುವಾರಿ ವಹಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಹರಣಕ್ಕೆ ಒಳಗಾದವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಇಂಫಾಲ್ ಹಾಗೂ ಜಿರೀಬಾಮ್ನಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನೂರಾರು ಮಂದಿ ಮೇಣದಬತ್ತಿ ಉರಿಸಿ ಪ್ರತಿಭಟಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.