ನವದೆಹಲಿ: ಮೂರು ವಿಮಾನಗಳನ್ನು ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ ಹಾಕಿದ್ದ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ತಿಳಿಸಿದ್ದಾರೆ.

ಬಾಂಬ್ ಬೆದರಿಕೆಯಿಂದಾಗಿ ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಿರುವ ಬಗ್ಗೆ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

‘ನಾನು ಡಿಜಿಸಿಎ, ಬಿಸಿಎಎಸ್, ಸಿಐಎಸ್ಎಫ್, ಎಂಎಚ್ಎ ಮತ್ತು ಎಂಒಸಿಎಯ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷನಾಗಿದ್ದೇನೆ. ಅ.14ರಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಇತ್ತೀಚಿನ ಬೆದರಿಕೆ ಪ್ರಕರಣಗಳ ಕುರಿತು ಮೇಲ್ವಿಚಾರಣೆ ನಡೆಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಿದ 19 ಪ್ರಕರಣಗಳು ದಾಖಲಾಗಿವೆ.
.ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ಆಕಾಶ ಏರ್ ವಿಮಾನಕ್ಕೆ ಬಾಂಬ್ ಬೆದರಿಕೆ.ಬಾಂಬ್ ಬೆದರಿಕೆ: ಷಿಕಾಗೊ ಹೊರಟಿದ್ದ ವಿಮಾನ ಕೆನಡಾಕ್ಕೆ ಮಾರ್ಗ ಬದಲಾವಣೆ.ಬಾಂಬ್ ಬೆದರಿಕೆ: ಅಯೋಧ್ಯೆಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ.3 ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ: ತುರ್ತು ಭೂಸ್ಪರ್ಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.