ಕಣ್ಣೂರು: ಕೇರಳದ ಪಯ್ಯನ್ನೂರು ಪ್ರದೇಶದಲ್ಲಿರುವ ಆರ್‌ಎಸ್‌ಎಸ್ ಕಚೇರಿ ಆವರಣದಲ್ಲಿ ದುಷ್ಕರ್ಮಿಗಳು ಬಾಂಬ್ ಎಸೆದಿದ್ದು, ಅದು ಸ್ಫೋಟಿಸಿದ್ದರಿಂದ ಕಟ್ಟಡದ ಕಿಟಕಿಗಳಿಗೆ ಹಾನಿಯಾಗಿದೆ.

‘ಸೋಮವಾರ ರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಎಷ್ಟು ಮಂದಿ ಈ ಕೃತ್ಯ ನಡೆಸಿದ್ದಾರೆ ಎಂಬುದು ಗೊತ್ತಾಗಿಲ್ಲ. ಘಟನಾ ಸ್ಥಳದ ಸುತ್ತಲಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ಪರಿಶೀಲಿಸುತ್ತಿದ್ದೇವೆ. ಈ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಿಪಿಐ(ಎಂ) ಕಾರ್ಯಕರ್ತರೇ ಕಚೇರಿ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ ಎಂದು ಆರ್‌ಎಸ್‌ಎಸ್ ಆರೋಪಿಸಿದೆ.

ಜೂನ್ 30ರ ರಾತ್ರಿ ಸಿಪಿಐ (ಎಂ) ಕೇಂದ್ರ ಕಚೇರಿ ಆವರಣದಲ್ಲೂ ದುಷ್ಕರ್ಮಿಗಳು ಬಾಂಬ್ ಎಸೆದಿದ್ದರು. ಕೃತ್ಯ ಎಸಗಿದ್ದ ಕಿಡಿಗೇಡಿಗಳನ್ನು ಪೊಲೀಸರು ಇನ್ನೂ ಪತ್ತೆಮಾಡಿಲ್ಲ ಎಂದು ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.