ಚಂಡೀಗಢ: ಹರಿಯಾಣದ ಇಬ್ಬರು ಪಕ್ಷೇತರ ಶಾಸಕರಾದ ದೇವೇಂದ್ರ ಕಾಡ್ಯಾನ್ ಮತ್ತು ರಾಜೇಶ್ ಜೂನ್ ಬಿಜೆಪಿ ಸೇರಿದ್ದಾರೆ ಎಂದು ಹರಿಯಾಣ ಬಿಜೆಪಿ ಘಟಕದ ಅಧ್ಯಕ್ಷ ಮೋಹನ್ ಲಾಲ್ ಬಡೋಲಿ ತಿಳಿಸಿದ್ದಾರೆ.

ಈ ಮೂಲಕ ಬಿಜೆಪಿ ಸಂಖ್ಯಾಬಲ 50ಕ್ಕೆ ಏರಿಕೆಯಾಗಿದೆ.

ಹಿಸ್ಸಾರ್ ಕ್ಷೇತ್ರ ಶಾಸಕಿ ಹಾಗೂ ದೇಶದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಕೂಡ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

ದೇವೇಂದ್ರ ಕಾಡ್ಯಾನ್ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಣೆ ಮಾಡಿತ್ತು. ಆಗಾಗಿ ಅವರು ಸ್ವತಂತ್ರವಾಗಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. ಇದೀಗ ಬಿಜೆಪಿ ಮರಳಿದ್ದಾರೆ. ರಾಜೇಶ್ ಜೂನ್ ಅವರು ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಗೆಲುವು ಸಾಧಿಸಿದ್ದರು. ಇದೀಗ ಬಿಜೆಪಿಗೆ ಸೇರಿದ್ದಾರೆ.

ಸಾವಿತ್ರಿ ಜಿಂದಾಲ್ ಕಳೆದ ಮಾರ್ಚ್ನಲ್ಲಿ ಬಿಜೆಪಿ ಸೇರಿದ್ದರು. ಆದರೆ ಪಕ್ಷ ಅವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಅವರು ಸ್ವತಂತ್ರವಾಗಿ ಸ್ಪರ್ಧೆ ಮಾಡಿ ಗೆದ್ದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.