ಸುಲ್ತಾನ್ಪುರ, ಉತ್ತರಪ್ರದೇಶ: ‘ಸುಲ್ತಾನ್ಪುರ ಜಿಲ್ಲೆಯ ಬೆಲಸದಾ ಗ್ರಾಮದ ಉದ್ಯಾನದ ಒಳಭಾಗದಲ್ಲಿದ್ದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಯನ್ನು ಅಪರಿಚಿತ ದುಷ್ಕರ್ಮಿಗಳು ಭಗ್ನಗೊಳಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ದಶಕದ ಹಿಂದೆ ಸ್ಥಾಪಿಸಲ್ಪಟ್ಟ ಪ್ರತಿಮೆಗೆ ಹಾನಿಯಾದ ಬೆನ್ನಲ್ಲೇ, ತನಿಖೆ ಆರಂಭಿಸಲಾಗಿದೆ. ಗುರುವಾರ ಬೆಳಿಗ್ಗೆ ಪ್ರತಿಮೆಗೆ ಹಾನಿಯಾಗಿರುವುದನ್ನು ಗ್ರಾಮಸ್ಥರು ಗಮನಿಸಿ, ಪೊಲೀಸರ ಗಮನಕ್ಕೆ ತಂದಿದ್ದಾರೆ.

‘ನಾವು ತನಿಖೆ ಆರಂಭಿಸಿದ್ದೇವೆ. ಹಾನಿಗೊಳಗಾದ ಪ್ರತಿಮೆಯನ್ನು ಸರಿಪಡಿಸಲಾಗಿದ್ದು, ದೂರು ಆಧರಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಕೊಟ್ವಾಲಿ ದೆಹತ್ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಸತ್ಯೇಂದ್ರ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.