ನವದೆಹಲಿ: ಪಾಂಗಾಂಗ್ ಸರೋವರಕ್ಕೆ ಚೀನಾ ನಿರ್ಮಿಸುತ್ತಿರುವ ಎರಡನೇ ಸೇತುವೆ 1960ರಿಂದಲೂ ಆ ದೇಶ ಅಕ್ರಮವಾಗಿ ವಶಪಡಿಸಿಕೊಂಡಿರುವ ಪ್ರದೇಶದ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಭಾರತ ಶುಕ್ರವಾರ ಹೇಳಿದೆ.

ಅಂಥ ಅತಿಕ್ರಮಣವನ್ನು ಭಾರತ ಎಂದಿಗೂ ಒಪ್ಪುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ಹೇಳಿದ್ದಾರೆ.

ಮಾಧ್ಯಮ ವರದಿಗಳಿಗೆ ಪ್ರತಿಕ್ರಿಯಿಸಿದ ಅವರು, ‘ಪಾಂಗಾಂಗ್ ಸರೋವರಕ್ಕೆ ಚೀನಾ ಈ ಮೊದಲಿನ ಸೇತುವೆ ಬಳಿ ಮತ್ತೊಂದು ಸೇತುವೆ ನಿರ್ಮಿಸುತ್ತಿರುವ ಬಗ್ಗೆ ವರದಿಗಳನ್ನು ನೋಡಿದ್ದೇವೆ. ಈ ಎರಡೂ ಸೇತುವೆಗಳು ಅಕ್ರಮ. 1960ರಿಂದಲೂ ಚೀನಾ ಅತಿಕ್ರಮಿಸಿರುವ ಪ್ರದೇಶದಲ್ಲೇ ಬರುತ್ತದೆ’ ಎಂದು ಅವರು ಹೇಳಿದ್ದಾರೆ.

ಗಡಿಯಲ್ಲಿ ಚೀನಾದಿಂದ ಸೇತುವೆ ನಿರ್ಮಾಣ ಯತ್ನ: ಕ್ರಮಕ್ಕೆ ರಾಹುಲ್ ಆಗ್ರಹ

‘ನಮ್ಮ ಭೂ ಪ್ರದೇಶದಲ್ಲಿ ಅಂಥ ಅಕ್ರಮ ನಿರ್ಮಾಣವನ್ನು ನಾವು ಒಪ್ಪುವುದಿಲ್ಲ. ನ್ಯಾಯಸಮ್ಮತವಲ್ಲದ ಚೀನಾದ ಪ್ರತಿಪಾದನೆಯನ್ನು ಒಪ್ಪಲಾಗದು’ ಎಂದು ಅವರು ಹೇಳಿದ್ದಾರೆ.

‘ಜಮ್ಮು ಮತ್ತು ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ ಎಂದು ಹಲವು ಬಾರಿ ನಾವು ಸ್ಪಷ್ಟಪಡಿಸಿದ್ದೇವೆ. ನಮ್ಮ ದೇಶದ ಸಾರ್ವಭೌಮತ್ವವನ್ನು, ಭೌಗೋಳಿಕ ಸಮಗ್ರತೆಯನ್ನು ಇತರ ರಾಷ್ಟ್ರಗಳು ಗೌರವಿಸಬೇಕು ಎಂಬುದನ್ನು ನಾವು ಬಯಸುತ್ತೇವೆ’ ಎಂದು ಅವರು ಹೇಳಿದ್ದಾರೆ.

ಪಾಂಗಾಂಗ್ ಸರೋವರದ ಬಳಿ ಚೀನಾ ಸೇತುವೆ: ಪರಿಸ್ಥಿತಿ ಅವಲೋಕಿಸುತ್ತಿದ್ದೇವೆ ಎಂದ ಭಾರತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.