ಹೈದರಾಬಾದ್ : ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ. ಕವಿತಾ ಸೋಮವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಆಕೆಯ ಸಹೋದರ ಹಾಗೂ ಬಿಆರ್‌ಎಸ್ ನಾಯಕ ಕೆ.ಟಿ ರಾಮರಾವ್ ಭಾನುವಾರ ಕವಿತಾ ಅವರನ್ನು ಭೇಟಿಯಾದ ಬಳಿಕ ಈ ಬೆಳವಣಿಗೆ ನಡೆದಿದೆ. ನ್ಯಾಯಾಲಯದ ಅನುಮತಿ ಮೇರೆಗೆ ಕೆಟಿಆರ್ ಕವಿತಾ ಅವರನ್ನು ಭೇಟಿ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
.ದೆಹಲಿ ಅಬಕಾರಿ ನೀತಿ ಹಗರಣ: ಭ್ರಷ್ಟಾಚಾರ ಪ್ರಕರಣದಲ್ಲಿ BRS ನಾಯಕಿ ಕವಿತಾ ಬಂಧನ.
ಪ್ರಕರಣ ಸಂಬಂಧ ಶುಕ್ರವಾರ ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಲ್ಲಿ ಕವಿತಾ ಅವರನ್ನು ಬಂಧಿಸಿ ದೆಹಲಿಗೆ ಕರೆತರಲಾಗಿತ್ತು. ಮರುದಿನ (ಶನಿವಾರ) ಆಕೆಯನ್ನು ವಿಶೇಷ ಪಿಎಂಎಲ್‌ಎ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಮಾರ್ಚ್ 23ರವರೆಗೆ ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿತ್ತು.
.ಅಬಕಾರಿ ನೀತಿ ಹಗರಣ | ನನ್ನ ಬಂಧನ ಕಾನೂನುಬಾಹಿರ: ಇ.ಡಿ ವಿರುದ್ಧ ಗುಡುಗಿದ ಕವಿತಾ.
ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗಾಗಿ ಕವಿತಾ ಅವರನ್ನು 10 ದಿನಗಳ ಕಾಲ ತನ್ನ ಕಸ್ಟಡಿಗೆ ಒಪ್ಪಿಸಬೇಕೆಂದು ಇ.ಡಿ ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿದ ಇ.ಡಿ ಪ್ರಕರಣಗಳ ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್‌ಪಾಲ್ ಅವರು ಈ ಆದೇಶ ನೀಡಿದ್ದರು.
.ಮಾರ್ಚ್ 23ರವರೆಗೆ ಇ.ಡಿ ಕಸ್ಟಡಿಗೆ ಕೆಸಿಆರ್ ಪುತ್ರಿ ಕೆ. ಕವಿತಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.