ಹೈದರಾಬಾದ್: ತೆಲಂಗಾಣದಲ್ಲಿ ವಿರೋಧ ಪಕ್ಷ ಬಿಆರ್ಎಸ್ಗೆ ಹಿನ್ನಡೆಯಾಗಿದ್ದು ಪಕ್ಷದ ಶಾಸಕ ಬಂಡ್ಲ ಕೃಷ್ಣ ಮೋಹನ್ ರೆಡ್ಡಿ ಶನಿವಾರ ಕಾಂಗ್ರೆಸ್ ಸೇರಿದ್ದಾರೆ.

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯ ನಂತರ ಬಿಆರ್ಎಸ್ ತೊರೆದು ಕಾಂಗ್ರೆಸ್ ಸೇರಿದ ಶಾಸಕರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಬಿಆರ್ಎಸ್ ಪಕ್ಷದ ಇನ್ನೂ ಕೆಲವು ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.

ಗಡ್ವಾಲ ಶಾಸಕರಾದ ಕೃಷ್ಣ ಮೋಹನ್ ರೆಡ್ಡಿ ಅವರು ಮುಖ್ಯಮಂತ್ರಿಗಳ ನಿವಾಸದಲ್ಲಿ ಸಿಎಂ ರೇವಂತ್ ರೆಡ್ಡಿ ಹಾಗೂ ಕಾಂಗ್ರೆಸ್ನ ಹಿರಿಯ ಮುಖಂಡರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.

119 ವಿಧಾನಸಭಾ ಕ್ಷೇತ್ರಗಳಿರುವ ತೆಲಂಗಾಣ ರಾಜ್ಯದಲ್ಲಿ ಕಳೆದ ವರ್ಷ ವಿಧಾನಸಭಾ ಚುನಾವಣೆ ನಡೆದಿತ್ತು. ಆಡಳಿತರೂಢ ಕಾಂಗ್ರೆಸ್ 64, ಬಿಆರ್ಎಸ್ 39, ಬಿಜೆಪಿ 8, ಎಐಎಂಎಲ್ಎಂ7 ಸ್ಥಾನಗಳಲ್ಲಿ ಗೆಲುವು ದಾಖಲಿಸಿದ್ದವು.

ಬಿಆರ್ಎಸ್ ಶಾಸಕರು ಕಾಂಗ್ರೆಸ್ಗೆ ಬಂದಿರುವುದರಿಂದ 64 ಸ್ಥಾನಗಳನ್ನು ಪಡೆದಿದ್ದ ಕಾಂಗ್ರೆಸ್ 71ಕ್ಕೆ ಜಿಗಿದಿದೆ. ಹಾಗೇ ಗುರುವಾರ ರಾತ್ರಿ ಆರು ಬಿಆರ್ಎಸ್ ಎಂಎಲ್ಸಿಗಳು ಕೂಡ ಆಡಳಿತಾರೂಢ ಕಾಂಗ್ರೆಸ್ ಸೇರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.