ಕೊಯಮತ್ತೂರು: ಇಲ್ಲಿ ಭಾರಿ ಮಳೆಯಿಂದಾಗಿ ಭಾನುವಾರ ರಾತ್ರಿ ಕಟ್ಟಡ ಕುಸಿದಿದ್ದು, ಅವಶೇಷಗಳಡಿ ಸಿಲುಕಿ ಮಹಿಳೆ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದರು.

ಕೊಯಮತ್ತೂರಿನಚತುರ್ವೇದಿ ರಸ್ತೆಯಲ್ಲಿ ಕಟ್ಟಡವೊಂದು ಭಾನುವಾರ ರಾತ್ರಿ 10.30 ಕ್ಕೆ ಕುಸಿದಿದೆ. ತಕ್ಷಣವೇ ಅಗ್ನಿಶಾಮಕ ದಳ ಮತ್ತು ಪೊಲೀಸರುಸ್ಥಳಕ್ಕೆ ಆಗಮಿಸಿದ್ದು, ಅವಶೇಷಗಳಡಿ ಸಿಲುಕಿದ್ದ ಐವರನ್ನು ರಕ್ಷಿಸಲಾಗಿದೆ. ಆದರೆ ಮಹಿಳೆ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ ಎಂದುಅಧಿಕಾರಿಗಳು ಮಾಹಿತಿ ನೀಡಿದರು.

ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಆರು ವರ್ಷದ ಮಗುವನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದ್ದು , ಇತರರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ಹೇಳಿದರು.

ಈ ರಕ್ಷಣಾ ಕಾರ್ಯಾಚರಣೆಯ ನೇತೃತ್ವವನ್ನುಜಿಲ್ಲಾಧಿಕಾರಿ ಕೆ. ರಾಜಾಮನಿ ಮತ್ತು ಪೊಲೀಸ್ ಆಯುಕ್ತ ಸುಮಿತ್ ಸರಣ್ ಅವರು ವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.