ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಒಡಿಶಾ | ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಚಿನ್ನಾಭರಣ ದೋಚಿದ ಕಳ್ಳರು

Published : 2 ಅಕ್ಟೋಬರ್ 2024, 9:38 IST
Last Updated : 2 ಅಕ್ಟೋಬರ್ 2024, 9:38 IST
ಫಾಲೋ ಮಾಡಿ
Comments

ಬಾಲೇಶ್ವರ: ಫ್ಲ್ಯಾಟ್‌ವೊಂದರಲ್ಲಿ ಚಿನ್ನಾಭರಣ ದೋಚಿದ ಕಳ್ಳರು, ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಫ್ಲ್ಯಾಟ್‌ನಲ್ಲಿ ತನ್ನ 2 ವರ್ಷದ ಮಗಳ ಜತೆ ಸಂತ್ರಸ್ತೆ ವಾಸವಾಗಿದ್ದರು. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಫ್ಲ್ಯಾಟ್‌ಗೆ ನುಗ್ಗಿದ ಇಬ್ಬರು ಕಳ್ಳರು ಚಾಕು ತೋರಿಸಿ, ಚಿನ್ನಾಭರಣಗಳನ್ನು ದೋಚಿದ್ದಾರೆ. ಇದೇ ವೇಳೆ ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಸಹಾಯಕ್ಕಾಗಿ ಕೂಗಲು ಪ್ರಾರಂಭಿಸಿದಾಗ ನಿನ್ನ ಮಗಳನ್ನು ಕೊಲ್ಲುವುದಾಗಿಯೂ ಬೆದರಿಕೆಯೊಡ್ಡಿದ್ದರು‘ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಖಾಸಗಿ ಕಂಪನಿಯೊಂದಲ್ಲಿ ಮಹಿಳೆ ಕೆಲಸ ಮಾಡುತ್ತಿದ್ದು, ಘಟನೆ ನಡೆದ ಸಂದರ್ಭದಲ್ಲಿ ಮಗಳ ಜತೆ ಒಬ್ಬರೇ ಇದ್ದರು. ಅಪಾರ್ಟ್‌ಮೆಂಟ್‌ನಲ್ಲಿ ಸಿಸಿಟಿವಿ ಇಲ್ಲದ ಕಾರಣ ಹತ್ತಿರದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT