ನವದೆಹಲಿ: ಉಪಸಭಾಪತಿಯಾಗಿದ್ದ ಎಸ್.ಎಲ್. ಧರ್ಮೇಗೌಡ ಅವರ ಸಾವಿನಿಂದ ತೆರವಾಗಿರುವ ರಾಜ್ಯ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ.

ವಿಧಾನಸಭೆ ಸದಸ್ಯರಿಂದ ಈ ಸ್ಥಾನದ ಆಯ್ಕೆ ನಡೆಯಲಿದ್ದು, ಮಾರ್ಚ್ 15ರಂದು ಮತದಾನ ನಿಗದಿಪಡಿಸಲಾಗಿದೆ.

ಫೆಬ್ರುವರಿ 25ರಂದು ಈ ಸಂಬಂಧ ಅಧಿಸೂಚನೆ ಹೊರಬೀಳಲಿದೆ. ನಾಮಪತ್ರ ಸಲ್ಲಿಕೆಗೆ ಮಾರ್ಚ್ 4 ಕೊನೆಯ ದಿನವಾಗಿದ್ದು, 5ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಿಂದಕ್ಕೆ ಪಡೆಯಲು ಮಾರ್ಚ್ 8 ಕೊನೆಯ ದಿನವಾಗಿದೆ.

ಮತದಾನವು 15ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 4ರವರೆಗೆ ನಡೆಯಲಿದ್ದು, ಸಂಜೆ 5ಕ್ಕೆ ಮತ ಎಣಿಕೆ ಕಾರ್ಯ ನಿಗದಿಯಾಗಿದೆ.

ಉಪ ಸಭಾಪತಿಯಾಗಿದ್ದ ಜೆಡಿಎಸ್‌ನ ಎಸ್.ಎಲ್. ಧರ್ಮೇಗೌಡ ಅವರು ಡಿಸೆಂಬರ್ 28ರಂದು ಕಡೂರು ಬಳಿ ರೈಲ್ವೆ ಟ್ರ್ಯಾಕ್ ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.