ನವದೆಹಲಿ: ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯು (ಸಿಎಎ) ಅಧಿಸೂಚನೆಯಲ್ಲಿ ಪ್ರಕಟವಾದ ನಂತರ ಅದಕ್ಕೆ ಸಂಬಂಧಿಸಿದ ನಿಯಮಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸುವುದಕ್ಕೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ 1,521 ದಿನಗಳು ಬೇಕಾದವು.

ಪೌರತ್ವ ತಿದ್ದುಪಡಿ ಮಸೂದೆಗೆ ಸಂಸತ್ತು 2019ರ ಡಿಸೆಂಬರ್ 11ರಂದು ಅಂಗೀಕಾರ ನೀಡಿತ್ತು. ಅದಕ್ಕೆ ರಾಷ್ಟ್ರಪತಿಯವರು ಮಾರನೆಯ ದಿನವೇ ಅಂಕಿತ ಹಾಕಿದ್ದರು. 2020ರ ಜನವರಿ 10ರಂದು ಕಾಯ್ದೆಯನ್ನು ಅಧಿಸೂಚನೆಯಲ್ಲಿ ಪ್ರಕಟಿಸಲಾಯಿತು. ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದಲೇ ನಿಯಮ ರೂಪಿಸುವುದನ್ನು ವಿಳಂಬ ಮಾಡಲಾಗುತ್ತಿದೆ ಎಂಬ ಅಭಿಪ್ರಾಯ ಒಂದು ವಲಯದಲ್ಲಿ ವ್ಯಕ್ತವಾಗಿತ್ತು.

ಸಿಎಎ ನಿಯಮಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸುವುದಕ್ಕೆ ಸರ್ಕಾರಕ್ಕೆ ಈವರೆಗೆ ಸಮಯ ಆಗಿರಲಿಲ್ಲ ಎಂಬುದೇ ಆಶ್ಚರ್ಯ ಎಂದು ಹಿರಿಯ ವಕೀಲ ಸಂಜಯ್ ಹೆಗ್ಡೆ ಪ್ರತಿಕ್ರಿಯೆ ನೀಡಿದ್ದಾರೆ. ‘ಕಾಯ್ದೆಯನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗಿದೆ. ತಡೆಯಾಜ್ಞೆ ಇಲ್ಲ’ ಎಂದು ಹೆಗ್ಡೆ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.