ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಕ್ಕಾಗಿ ರೂಪಿಸಲಾಗಿರುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದ ಕೆಲವೇ ದಿನಗಳಲ್ಲಿ ‘ಕೃಷಿ ಕಾಯ್ದೆಗಳ ರದ್ದತಿ ಮಸೂದೆ 2021’ಕ್ಕೆ ಸಂಪುಟ ಅನುಮೋದನೆ ನೀಡಿದೆ ಎಂದು ಮೂಲಗಳು ಹೇಳಿವೆ.

ಓದಿ:ಕೃಷಿ ಕಾಯ್ದೆ ಹಿಂಪಡೆಯುವುದಾಗಿ ಘೋಷಿಸಿದ ಮೋದಿ: ಕಾನೂನು ರದ್ದುಗೊಳಿಸುವುದು ಹೇಗೆ?

ಹೊಸ ಮಸೂದೆಯನ್ನು ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಸರ್ಕಾರ ಮಂಡಿಸಲಿದೆ. ಅಧಿವೇಶನ ನವೆಂಬರ್ 29ರಂದು ಆರಂಭವಾಗಲಿದೆ.

ರೈತರ ದೀರ್ಘಕಾಲೀನ ಪ್ರತಿಭಟನೆಯ ಬಳಿಕ ನವೆಂಬರ್ 19ರಂದು ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಮೋದಿಯವರು, ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.