ನವದೆಹಲಿ: ಪ್ರತಿಭಾವಂತ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಹಣಕಾಸಿನ ನೆರವು ನೀಡುವ ‘ಪ್ರಧಾನಮಂತ್ರಿ–ವಿದ್ಯಾಲಕ್ಷ್ಮಿ ಯೋಜನೆ’ಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

‘ಈ ಯೋಜನೆಯ ಪ್ರಕಾರ, ಗುಣಮಟ್ಟದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದ ಬೋಧನಾ ಶುಲ್ಕಗಳು ಹಾಗೂ ಇತರ ಶುಲ್ಕಗಳನ್ನು ಭರಿಸಲು ಖಾತರಿ ಮುಕ್ತ ಹಾಗೂ ಜಾಮೀನು ಮುಕ್ತ ಸಾಲ ಪಡೆಯಲು ಅರ್ಹರು. ಈ ಯೋಜನೆಯು ರಾಷ್ಟ್ರೀಯ ಶಿಕ್ಷಣ ನೀತಿ–2020ರ ಮತ್ತೊಂದು ಪ್ರಮುಖ ಉಪಕ್ರಮ’ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗಾರರಿಗೆ ಇಲ್ಲಿ ತಿಳಿಸಿದರು.

‘ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ್ಯಾಂಕಿಂಗ್ನ (ಎನ್ಐಆರ್ಎಫ್) ಪಟ್ಟಿಯಲ್ಲಿರುವ ಅಗ್ರ 860 ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಲ ಒದಗಿಸುವ ಯೋಜನೆಗೆ ₹3,600 ಕೋಟಿ ನೀಡಲು ಅನುಮೋದಿಸಲಾಗಿದೆ. ಈ ಯೋಜನೆಯಿಂದ ಪ್ರತಿವರ್ಷ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಈ ಯೋಜನೆಯು ಸರಳ, ಪಾರದರ್ಶಕ ಮತ್ತು ವಿದ್ಯಾರ್ಥಿಸ್ನೇಹಿ ವ್ಯವಸ್ಥೆಯ ಮೂಲಕ ಕಾರ್ಯನಿರ್ವಹಿಸಲಿದೆ’ ಎಂದು ಅವರು ಮಾಹಿತಿ ನೀಡಿದರು.

ಬ್ಯಾಂಕ್ಗಳಿಗೆ ಸಹಾಯ ಮಾಡಲು ₹7.5 ಲಕ್ಷದವರೆಗಿನ ಸಾಲದ ಮೊತ್ತಕ್ಕೆ ಕೇಂದ್ರ ಸರ್ಕಾರವು ಶೇ 75 ರಷ್ಟು ಸಾಲ ಖಾತರಿ ನೀಡಲಿದೆ. ಇದಲ್ಲದೆ, ಕುಟುಂಬದ ವಾರ್ಷಿಕ ಆದಾಯ ₹ 8 ಲಕ್ಷದ ವರೆಗೆ ಹೊಂದಿರುವ ವಿದ್ಯಾರ್ಥಿಗಳಿಗೆ ಈ ಯೋಜನೆಯು ₹10 ಲಕ್ಷದ ವರೆಗಿನ ಸಾಲಕ್ಕೆ ಶೇ 3 ಬಡ್ಡಿ ರಿಯಾಯಿತಿ ಒದಗಿಸಲಿದೆ ಎಂದರು.

‘ಪ್ರತಿವರ್ಷ ಒಂದು ಲಕ್ಷ ವಿದ್ಯಾರ್ಥಿಗಳಿಗೆ ಬಡ್ಡಿ ರಿಯಾಯಿತಿ ನೀಡಲಾಗುವುದು. ಸರ್ಕಾರಿ ಸಂಸ್ಥೆಗಳನ್ನು, ತಾಂತ್ರಿಕ ಮತ್ತು ವೃತ್ತಿಪರ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು’ ಎಂದರು.

ಈ ಯೋಜನೆಯಿಂದ ಬಡ ಮತ್ತು ಮಧ್ಯಮ ವರ್ಗದ ಲಕ್ಷಾಂತರ ವಿದ್ಯಾರ್ಥಿಗಳ ಸಬಲೀಕರಣವಾಗಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.