ನವದೆಹಲಿ: ದೇಶದಾದ್ಯಂತ ಒಂದು ಕೋಟಿ ರೈತರು ‘ನೈಸರ್ಗಿಕ ಕೃಷಿ’ ಕೈಗೊಳ್ಳುವಂತೆ ಉತ್ತೇಜಿಸಲು ₹2,481 ಕೋಟಿ ಮೊತ್ತದ ರಾಷ್ಟ್ರೀಯ ಯೋಜನೆಗೆ ಕೇಂದ್ರ ಸರ್ಕಾರ ಸೋಮವಾರ ಒಪ್ಪಿಗೆ ನೀಡಿದೆ.

ಸುಸ್ಥಿರ ಕೃಷಿಗಾಗಿ ಪರಿಸರ ವ್ಯವಸ್ಥೆ ರೂಪಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

‘ಮಣ್ಣಿನ ಗುಣಮಟ್ಟದ ಸುಧಾರಣೆ– ರಾಸಾಯನಿಕ ಮುಕ್ತ ಆಹಾರ ಉತ್ಪಾದಿಸುವ ಮೂಲಕ ಜನರ ಆರೋಗ್ಯ ಕಾಪಾಡುವುದು ತುರ್ತು ಅಗತ್ಯ. ಈ ನಿಟ್ಟಿನಲ್ಲಿ ನೈಸರ್ಗಿಕ ಕೃಷಿ– ರಾಷ್ಟ್ರೀಯ ಯೋಜನೆಯು ಮೈಲಿಗಲ್ಲು ಆಗಲಿದೆ’ ಎಂದು ಕೇಂದ್ರ ಮಾಹಿತಿ ಹಾಗೂ ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘₹2,481 ಕೋಟಿ ಬಜೆಟ್ ನಿಗದಿಪಡಿಸಲಾಗಿದ್ದು, ದೇಶದಾದ್ಯಂತ 1 ಕೋಟಿ ರೈತರನ್ನು ಇದರಲ್ಲಿ ಸೇರ್ಪಡೆಗೊಳಿಸುವ ಗುರಿ ಹೊಂದಲಾಗಿದೆ’ ಎಂದರು.

‘ದೇಶದಾದ್ಯಂತ ಈಗ ಸುಮಾರು 10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನೈಸರ್ಗಿಕ ಕೃಷಿ ನಡೆಸಲಾಗುತ್ತಿದೆ’ ಎಂದು ವೈಷ್ಣವ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.