ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಂಪುಟ ಸಮಿತಿ ಸಭೆ ನಡೆದಿದ್ದು, ಬಾಂಗ್ಲಾದೇಶದ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್.ಜೈಶಂಕರ್, ರಕ್ಷಣಾ ಸಚಿವ ರಾಜನಾಥ ಸಿಂಗ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

ದೇಶದ ಭದ್ರತೆ ಮತ್ತು ಬಾಂಗ್ಲಾದ ಅರಾಜಕತೆ ಕುರಿತಂತೆ ಸಭೆಯಲ್ಲಿ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರು ಇಂದು ರಾಜೀನಾಮೆ ನೀಡಿದ್ದು, ದೇಶದಿಂದ ಪಲಾಯನ ಮಾಡಿದ್ದಾರೆ ಎಂದು ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ತಿಳಿಸಿದ್ದಾರೆ.

ಸರ್ಕಾರದ ವಿರುದ್ಧ ಭಾನುವಾರದಿಂದ ಆರಂಭವಾಗಿರುವ ಬೃಹತ್ ಪ್ರತಿಭಟನೆಯಿಂದಾಗಿ ಇದುವರೆಗೆ 106 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಹಸೀನಾ ಅವರು ಇಂದು (ಸೋಮವಾರ) ರಾಜೀನಾಮೆ ಸಲ್ಲಿಸಿ, ದೇಶ ತೊರೆದಿದ್ದಾರೆ ಎಂದು ವರದಿಯಾಗಿದೆ.

ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ 4,096 ಕಿ.ಮೀ ಉದ್ದದ ಭಾರತ-ಬಾಂಗ್ಲಾದೇಶ ಗಡಿಯುದ್ದಕ್ಕೂ ಗಡಿ ಭದ್ರತಾ ಪಡೆಯು (ಬಿಎಸ್‌ಎಫ್) ಹೈ ಅಲರ್ಟ್ ಘೋಷಿಸಿದೆ.
.ಬಾಂಗ್ಲಾದಲ್ಲಿ ದಂಗೆ: ರಾಜೀನಾಮೆ ನೀಡಿ ದೇಶ ತೊರೆದ ಪ್ರಧಾನಿ ಶೇಖ್ ಹಸೀನಾ.Bangla Unrest | ರಾಹುಲ್–ಜೈಶಂಕರ್ ಭೇಟಿ; ಬಾಂಗ್ಲಾದ ಬೆಳವಣಿಗೆಗಳ ಬಗ್ಗೆ ಚರ್ಚೆ.Bangla Unrest: ಇಂದಿರಾ ಗಾಂಧಿ ಸಾಂಸ್ಕೃತಿಕ ಕೇಂದ್ರ, ಹಿಂದೂ ದೇವಾಲಯಗಳಿಗೆ ಹಾನಿ.Bangla Unrest | ಕೋಲ್ಕತ್ತ-ಢಾಕಾ ಮೈತ್ರಿ ಎಕ್ಸ್ಪ್ರೆಸ್ ರೈಲು ರದ್ದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.