ಕೋಲ್ಕತ್ತ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ, ಹತ್ಯೆಗೊಳಗಾದ 10 ವರ್ಷ ವಯಸ್ಸಿನ ಬಾಲಕಿಯ ಮರಣೋತ್ತರ ಪರೀಕ್ಷೆಯನ್ನು ಇನ್ನೊಮ್ಮೆ ನಡೆಸಬೇಕು ಎಂದು ಕಲ್ಕತ್ತ ಹೈಕೋರ್ಟ್ ಭಾನುವಾರ ಆದೇಶಿಸಿದೆ.

ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ನಡೆದಾಗ 10 ವರ್ಷ ವಯಸ್ಸಿನ ಬಾಲಕಿಯು ಟ್ಯೂಷನ್ ಕ್ಲಾಸ್ ಮುಗಿಸಿ ಮನೆಗೆ ಮರಳುತ್ತಿದ್ದಳು ಎನ್ನಲಾಗಿದೆ.

ಬಾಲಕಿಯ ಪಾಲಕರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ತೀರ್ಥಂಕರ ಘೋಷ್ ಅವರು, ಏಮ್ಸ್ ಆಸ್ಪತ್ರೆಯಲ್ಲಿ ಎರಡನೆಯ ಬಾರಿಗೆ ಮರಣೋತ್ತರ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದರು. ಪರೀಕ್ಷೆ ನಡೆಸುವ ಸಂದರ್ಭದಲ್ಲಿ ಬರೂಈಪುರದ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟರು (ಎಜಿಜೆಎಂ) ಹಾಜರಿರಬೇಕು ಎಂದು ಕೂಡ ಹೈಕೋರ್ಟ್ ಹೇಳಿದೆ.

ಪೋಕ್ಸೊ ಕಾಯ್ದೆಯ ಅಡಿಯಲ್ಲಿಯೂ ಪೊಲೀಸರು ಪ್ರಕರಣ ದಾಖಲು ಮಾಡಿಕೊಳ್ಳಬೇಕು ಎಂದು ನ್ಯಾಯಮೂರ್ತಿ ಘೋಷ್ ಅವರು ಸೂಚನೆ ನೀಡಿದ್ದಾರೆ.

ಮರಣೋತ್ತರ ಪರೀಕ್ಷೆಯನ್ನು ರಾಜ್ಯ ಸರ್ಕಾರದ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ನಡೆಸುವಂತಿಲ್ಲ; ಏಮ್ಸ್ನ ವೈದ್ಯರೇ ಪರೀಕ್ಷೆ ನಡೆಸಬೇಕು ಎಂದು ಸ್ಪಷ್ಟಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.