ಭುವನೇಶ್ವರ: ‘ಭಾರತದ ನ್ಯಾಯಾಂಗ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಬಿಕ್ಕಟ್ಟಿನಲ್ಲಿದೆ ಎಂದು ಜಾಗತಿಕ ಮಟ್ಟದಲ್ಲಿ ಅಪಪ್ರಚಾರ ನಡೆಸುವ ಪ್ರಯತ್ನಗಳು ನಡೆಯುತ್ತಿವೆ’ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಶನಿವಾರ ಬೇಸರ ವ್ಯಕ್ತಪಡಿಸಿದ್ದಾರೆ.

ಪೂರ್ವ ರಾಜ್ಯಗಳ ವಕೀಲರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಭಾರತ ಮತ್ತು ಅದರ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ದೂಷಿಸುವಲ್ಲಿ ಯಾವುದೇ ಉದ್ದೇಶಪೂರ್ವಕ ಪ್ರಚಾರ ಯಶಸ್ವಿಯಾಗುವುದಿಲ್ಲ’ ಎಂದಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಉಪನ್ಯಾಸದಲ್ಲಿ, ‘ಭಾರತದ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಯುತ್ತಿದೆ ಮತ್ತು ನನ್ನನ್ನೂ ಸೇರಿದಂತೆ ಹಲವು ರಾಜಕಾರಣಿಗಳು ಕಣ್ಗಾವಲಿನಲ್ಲಿದ್ದೇವೆ’ ಎಂದು ಆರೋಪಿಸಿದ ಮರು ದಿನ ಕೇಂದ್ರ ಸಚಿವರಿಂದ ಈ ಪ್ರತಿಕ್ರಿಯೆ ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.