ಜೈಪುರ: ನವೆಂಬರ್ 25 ರಂದು ನಡೆಯಲಿರುವ ರಾಜಸ್ಥಾನ ವಿಧಾನಸಭಾ ಚುನಾವಣೆಯ ಮತದಾನಕ್ಕಾಗಿ ಬಹಿರಂಗ ಪ್ರಚಾರ ಗುರುವಾರ ಸಂಜೆ ಕೊನೆಗೊಂಡಿತು.

ಆಡಳಿತಾರೂಢ ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರದಲ್ಲಿ ಮುಖ್ಯವಾಗಿ ಅಶೋಕ್ ಗೆಹಲೋತ್ ಸರ್ಕಾರದ ಯೋಜನೆಗಳ ಮೇಲೆ ಕೇಂದ್ರೀಕರಿಸಿದೆ. ಪಕ್ಷ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದರೆ ಏಳು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಭರವಸೆ ನೀಡಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಗೆಹಲೋತ್ ಸೇರಿದಂತೆ ಇತರರು ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಚುನಾವಣಾ ಪ್ರಚಾರದ ನೇತೃತ್ವ ವಹಿಸಿದ್ದು, ಬಿಕಾನೇರ್ ಮತ್ತು ಜೈಪುರದಲ್ಲಿ ರೋಡ್ ಶೋ ನಡೆಸಿದ್ದಾರೆ.

ರಾಜಸ್ಥಾನದಲ್ಲಿ ಒಟ್ಟು 200 ವಿಧಾನಸಭಾ ಕ್ಷೇತ್ರಗಳಿವೆ. ಶ್ರೀಗಂಗಾನಗರದ ಕರಣ್‌ಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೊನೂರ್ ನಿಧನರಾದ ಹಿನ್ನೆಲೆ 199 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 199 ವಿಧಾನಸಭಾ ಕ್ಷೇತ್ರಗಳಲ್ಲಿ 5,25,38,105 ಮತದಾರರಿದ್ದಾರೆ.

ಶನಿವಾರ(ನ.25) ಮತದಾನ

ಶನಿವಾರ ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ. ಡಿ.3 ರಂದು ಫಲಿತಾಂಶ ಪ್ರಕಟವಾಗಲಿದೆ. 'ನಿಯಮಾವಳಿ ಪ್ರಕಾರ ಚುನಾವಣಾ ಸಂಬಂಧಿತ ಸಾರ್ವಜನಿಕ ಸಭೆ, ಮೆರವಣಿಗೆ ಅಥವಾ ದೂರದರ್ಶನದಲ್ಲಿ ಪ್ರಚಾರ ನಡೆಸುವಂತಿಲ್ಲ. ಯಾವುದೇ ವ್ಯಕ್ತಿ ನಿಬಂಧನೆಗಳನ್ನು ಉಲ್ಲಂಘಿಸಿದರೆ, 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ವಿಧಿಸಲಾಗುವುದು' ಎಂದು ಮುಖ್ಯ ಚುನಾವಣಾ ಅಧಿಕಾರಿ ಪ್ರವೀಣ್ ಗುಪ್ತಾ ತಿಳಿಸಿದ್ದಾರೆ.
.ಚುನಾವಣಾ ಪಯಣ | ರಾಜಸ್ಥಾನ: ಚುನಾವಣೆ ದೊಡ್ಡವರದು, ಮತ ನಮ್ಮದು - ಮತದಾರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.