ನವದೆಹಲಿ:‘ಪಕ್ಷದ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಬೇಕು ಎಂಬ ಅವಸರವೇನಿಲ್ಲ. ಚುನಾಯಿತ ಅಧ್ಯಕ್ಷರು ಇಲ್ಲದಿದ್ದರೆ ಆಕಾಶವೇನೂ ಕಳಚಿಬೀಳುವುದಿಲ್ಲ’ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಸಲ್ಮಾನ್ ಖುರ್ಷೀದ್ ಭಾನುವಾರ ಹೇಳಿದ್ದಾರೆ.

‘ಅಧ್ಯಕ್ಷರಾಗಿಕಾರ್ಯ ನಿರ್ವಹಿಸುತ್ತಿರುವ ಸೋನಿಯಾ ಗಾಂಧಿ ಪಕ್ಷವನ್ನು ಈಗ ಮುನ್ನಡೆಸುತ್ತಿದ್ದಾರೆ. ನಾಯಕತ್ವ ವಿಷಯದ ಬಗ್ಗೆ ಸಹ ಅವರೇ ತೀರ್ಮಾನಿಸಲಿದ್ದಾರೆ’ ಎಂದು ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

‘ಪಕ್ಷದ ನಾಯಕತ್ವದಲ್ಲಿ ಆಮೂಲಾಗ್ರ ಬದಲಾವಣೆ ಬಯಸಿ ಸೋನಿಯಾ ಗಾಂಧಿಯವರಿಗೆ ಪತ್ರ ಬರೆದಿದ್ದ ಮುಖಂಡರು ಒಂದು ವೇಳೆ ಈ ಮೊದಲೇ ನನ್ನನ್ನು ಭೇಟಿ ಮಾಡಿದ್ದರೂ, ನಾನು ಆ ಪತ್ರಕ್ಕೆ ಸಹಿ ಮಾಡುತ್ತಿರಲಿಲ್ಲ’ ಎಂದೂ ಹೇಳಿದ್ದಾರೆ.

‘ಈ ಹಿಂದಿನ ವರ್ಷಗಳಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗಳು ನಡೆದಿರಲಿಲ್ಲ. ಆದರೂ ಪಕ್ಷ ಅಧಿಕಾರದಲ್ಲಿತ್ತು. ಅಧಿಕಾರ ಅನುಭವಿಸಿದವರ ಪೈಕಿ ಗುಲಾಂ ನಬಿ ಆಜಾದ್ ಅವರೂ ಒಬ್ಬರಾಗಿದ್ದರು’ ಎಂದು ಆಜಾದ್ ಅವರ ನಡೆ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದ ಮುಖಂಡರು ಸುಲಭವಾಗಿ ಅವರೊಂದಿಗೆ ಮಾತನಾಡುವ ಅವಕಾಶ ಹೊಂದಿದ್ದರು. ಈ ರೀತಿ ಪತ್ರ ಬರೆಯುವ ಬದಲು, ಖುದ್ದಾಗಿ ಭೇಟಿಯಾಗಿ ತಮ್ಮ ಅಹವಾಲು ಸಲ್ಲಿಸಬಹುದಿತ್ತು’ ಎಂದೂ ಅಭಿಪ್ರಾಯಪಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.