ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ 48 ರಾಷ್ಟ್ರೀಯ ರೈಫಲ್ಸ್‌ನ ಭಾರತೀಯ ಸೇನೆಯ ಕ್ಯಾಪ್ಟನ್ ಹುತಾತ್ಮರಾಗಿದ್ದು, ಯೋಧರೊಬ್ಬರು ಗಾಯಗೊಂಡಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ಶಿವಗಢ-ಅಸ್ಸಾರ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಶಂಕೆ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭದ್ರತಾ ಪಡೆಗಳ ಮೂಲಗಳು ತಿಳಿಸಿವೆ.

ಉಗ್ರರ ಬಳಿ ಕಾರ್ಬೈನ್ ಬಂದೂಕು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ ಎಂದು ತಿಳಿದುಬಂದಿದೆ.

ಇತ್ತ ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕ ದಾಳಿಗಳಿಗೆ ಸಂಬಂಧಿಸಿ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ರಕ್ಷಣಾ ಕಾರ್ಯದರ್ಶಿ ಗಿರಿಧರ್ ಅರಮನೆ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್, ಸೇನಾ ಮುಖ್ಯಸ್ಥರಾದ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ, ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಪ್ರತೀಕ್ ಶರ್ಮಾ ಮತ್ತು ಭದ್ರತಾ ಸಂಬಂಧಿತ ಏಜೆನ್ಸಿಗಳ ಮುಖ್ಯಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.
.ಕಾಶ್ಮೀರ | ಹೆಚ್ಚುತ್ತಿರುವ ಭಯೋತ್ಪಾದಕ ದಾಳಿ: ತುರ್ತು ಸಭೆ ನಡೆಸಿದ ರಾಜನಾಥ ಸಿಂಗ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.