ರಾಂಚಿ: ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಮಾರು 271 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೆಲಾವಲ್ ಪ್ರದೇಶದಲ್ಲಿ ಭಾನುವಾರ ರಾತ್ರಿ ಈ ಘಟನೆ ಸಂಭವಿಸಿದೆ. ರಾಂಚಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಬಸ್‌ನಲ್ಲಿ ಹಿಂತಿರುಗುತ್ತಿದ್ದ ಬಜರಂಗದಳದ ಕಾರ್ಯಕರ್ತರು ಮಸೀದಿಯ ಬಳಿ ‘ಜೈ ಶ್ರೀ ರಾಮ್’ ಮತ್ತು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿರುವುದಾಗಿ ಆರೋಪವಿದೆ ಎಂದು ಹಜಾರಿಬಾಗ್‌ನ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರತನ್ ಚೋಥೆ ಹೇಳಿದ್ದಾರೆ.

ಇದರ ಬೆನ್ನಲ್ಲೆ ಗುಂಪುವೊಂದರಿಂದ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಹಿಂಸಾಚಾರದಲ್ಲಿ ಸುಮಾರು 10 ಬಜರಂಗದಳ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೆಲಾವಲ್ ಪೊಲೀಸ್ ಠಾಣೆಯಲ್ಲಿ ಸುಮಾರು 271 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಚೋಥೆ ತಿಳಿಸಿದ್ದಾರೆ.

ಸದ್ಯ ಪರಿಸ್ಥಿತಿ ಹತೋಟಿಯಲ್ಲಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇನ್ನೂ ಕೆಲವರ ಬಂಧನವಾಗಬೇಕಿದೆ ಎಂದು ಅವರು ಹೇಳಿದ್ದಾರೆ.

ಘಟನೆಗೆ ಸಂಬಂಧಪಟ್ಟವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ನ್ಯಾನ್ಸಿ ಸಹಾಯ್ ತಿಳಿಸಿದ್ದಾರೆ.

ಮುಂದಿನ ವರ್ಷ ಜನವರಿಯಲ್ಲಿ ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಉದ್ಘಾಟನೆ ಹಿನ್ನೆಲೆಯಲ್ಲಿ ಧಾರ್ಮಿಕ ವಿಧಿವಿಧಾನಗಳಿಗೆ ಜನರನ್ನು ಆಹ್ವಾನಿಸಲು ವಿಶ್ವ ಹಿಂದೂ ಪರಿಷತ್ತಿನ ಯುವ ವಿಭಾಗ ಬಜರಂಗದಳವು ಭಾನುವಾರ ರಾಂಚಿಯಲ್ಲಿ ನಾಲ್ಕು ‘ಶೌರ್ಯ ಜಾಗರಣ ಯಾತ್ರೆ’ಗಳನ್ನು ಹಮ್ಮಿಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.