ಕೋಲ್ಕತ್ತ: ಕೋಲ್ಕತ್ತ-ಅಬುಧಾಬಿ ವಿಮಾನದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜಿಂದಾಲ್ ಕಂಪನಿಯ ಹಿರಿಯ ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಕೋಲ್ಕತ್ತದ ಉತ್ತರ ಹೊರವಲಯದಲ್ಲಿರುವ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಪೋಷಕರು ನೀಡಿದ ದೂರಿನನ್ವಯ ಎಫ್ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಕಿರುಕುಳ ಕುರಿತು ಸಂತ್ರಸ್ತ ಮಹಿಳೆ ‘ಎಕ್ಸ್’ನಲ್ಲಿ ಸರಣಿ ಪೋಸ್ಟ್ಗಳನ್ನು ಮಾಡಿದ್ದಾರೆ. ಆರೋಪಿಯು ಕೆಲವು ಅಶ್ಲೀಲ ವಿಡಿಯೊಗಳನ್ನು ತೋರಿಸುವ ಮೂಲಕ ನನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಕರಣ ಸಂಬಂಧ ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 74, 75 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಜಿಂದಾಲ್ ಸ್ಟೀಲ್ ಆ್ಯಂಡ್ ಪವರ್ ಲಿಮಿಟೆಡ್ನ (ಜೆಎಸ್ಪಿಎಲ್) ಅಧ್ಯಕ್ಷ ನವೀನ್ ಜಿಂದಾಲ್ ಅವರು ಕಂಪನಿಯ ಎಕ್ಸಿಕ್ಯೂಟಿವ್ ವಿರುದ್ಧ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.