ಕೋಲ್ಕತ್ತ: ಟಿಎಂಸಿ ನಾಯಕನಿಂದ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ರೈತರ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಂಡ ಆರೋಪ ಕೇಳಿ ಬಂದಿರುವ ಪಶ್ಚಿಮ ಬಂಗಾಳದ ಸಂದೇಶ್ಖಾಲಿಗೆ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸಲು ಸಿಬಿಐ ಪ್ರತ್ಯೇಕ ಇಮೇಲ್ ಐಡಿ ಸ್ಥಾಪಿಸಿದೆ.

sandeshkhali@cbi.gov.in,ಇಮೇಲ್ ಐಡಿಗೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್ಖಾಲಿ ಜನರು ತಮ್ಮ ದೂರುಗಳನ್ನು ದಾಖಲಿಸಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2024ರ ಏಪ್ರಿಲ್ 10ರಂದು ಕಲ್ಕತ್ತಾ ಹೈಕೋರ್ಟ್ನ ವಿಭಾಗೀಯ ಪೀಠವು ನೀಡಿದ ಆದೇಶದ ಅನುಸಾರವಾಗಿ ಸಿಬಿಐ, ಸಂದೇಶ್ಖಾಲಿಗೆ ಮೀಸಲಾದ ಇಮೇಲ್ ಅನ್ನು ರಚಿಸಿದೆ. ಇದರಲ್ಲಿ ಮಹಿಳೆಯರ ವಿರುದ್ಧದ ದೌರ್ಜನ್ಯಗಳು ಮತ್ತು ಬಲವಂತವಾಗಿ ಭೂಮಿಯನ್ನು ವಶಪಡಿಸಿಕೊಳ್ಳುವ ಬಗ್ಗೆ ಸಂದೇಶ್ಖಾಲಿಯ ಜನರು ದೂರುಗಳನ್ನು ಸಲ್ಲಿಸಬಹುದು ಎಂದು ಸಿಬಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಇಮೇಲ್ ಐಡಿ ಕುರಿತಾಗಿ ಆ ಪ್ರದೇಶದಲ್ಲಿ ವ್ಯಾಪಕ ಪ್ರಚಾರ ಮಾಡಲು ದೇಶೀಯ ಪತ್ರಿಕೆಗಳಲ್ಲಿ ಸಾರ್ವಜನಿಕ ಸೂಚನೆಯನ್ನು ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅದು ಹೇಳಿದೆ.

ಸಂದೇಶ್ಖಾಲಿಯಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ಭೂಕಬಳಿಕೆ ಆರೋಪಗಳ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶಿಸಿದೆ. ನೊಂದವರಿಗೆ ನ್ಯಾಯ ಒದಗಿಸುವ ಹಿತದೃಷ್ಟಿಯಿಂದ ನಿಷ್ಪಕ್ಷಪಾತ ತನಿಖೆ ಅಗತ್ಯವಿದೆ ಎಂದೂ ನ್ಯಾಯಾಲಯ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.