ರಾಂಚಿ: ಮೇವು ಹಗರಣದಲ್ಲಿ ಡೊರಂಡಾ ಖಜಾನೆಯಿಂದ ₹ 139 ಕೋಟಿ ದುರ್ಬಳಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಅವರಿಗೆ 5 ವರ್ಷ ಸಜೆ ಮತ್ತು ₹ 60 ಲಕ್ಷ ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ.

ಲಾಲು ಪ್ರಸಾದ್ಈ ಪ್ರಕರಣದಲ್ಲಿಯೂ ದೋಷಿಯಾಗಿದ್ದಾರೆ ಎಂದು ಇದೇ 15ರಂದು ಘೋಷಿಸಿದ್ದ ಸಿಬಿಐನ ವಿಶೇಷ ಕೋರ್ಟ್, ಇದಕ್ಕೆ ಸಂಬಂಧಿಸಿದ ಶಿಕ್ಷೆಯ ಪ್ರಮಾಣವನ್ನು ಸೋಮವಾರ ಪ್ರಕಟಿಸಿತು.

ಸೋಮವಾರ ತೀರ್ಪು ಪ್ರಕಟವಾಗುತ್ತಿದ್ದಂತೆಯೇಲಾಲು ಅವರನ್ನು ಬಿರ್ಸಾ ಮುಂಡಾ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ಅನಾರೋಗ್ಯದಿಂದ ಬಳಲುತ್ತಿರುವ 73 ವರ್ಷದ ಅವರನ್ನು ಬಳಿಕ ರಾಂಚಿಯಲ್ಲಿರುವ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ.

ಹೆದರಲ್ಲ: ಲಾಲು ಪ್ರಸಾದ್ ಅವರಿಗೆ ಜೈಲು ಶಿಕ್ಷೆಯಾಗಿರುವುದಕ್ಕೆ ಅವರ ಮಗ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಒಂದು ವೇಳೆ ಲಾಲು ಅವರು ಬಿಜೆಪಿ ಜತೆ ಕೈಜೋಡಿಸಿದ್ದರೆ ಅವರನ್ನು ರಾಜ ಸತ್ಯಹರಿಶ್ಚಂದ್ರ ಎಂದು ಕರೆಯಲಾಗುತ್ತಿತ್ತು. ಆದರೆ ಅವರು ಆರ್‌ಎಸ್‌ಎಸ್–ಬಿಜೆಪಿ ವಿರುದ್ಧ ಹೋರಾಡುತ್ತಿದ್ದಾರೆ. ಹೀಗಾಗಿ ಅವರಿಗೆ ಜೈಲು ಶಿಕ್ಷೆಯಾಗಿದೆ. ಇದಕ್ಕೆಲ್ಲ ನಾವು ಹೆದರುವುದಿಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.