ನವದೆಹಲಿ : ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲಾಗಿಸಿ ಮೆರವಣಿಗೆ ಮಾಡಿದ್ದ ಪ್ರಕರಣದಲ್ಲಿ ಕಾನೂನು ಸಂಘರ್ಷ ಎದುರಿಸುತ್ತಿರುವ ಬಾಲಕ ಮತ್ತು ಇತರ ಆರು ಜನರ ವಿರುದ್ಧ ಸಿಬಿಐ ಸೋಮವಾರ ದೋಷಾರೋಪ ಪಟ್ಟಿಯನ್ನು ದಾಖಲಿಸಿತು.

ಕಾಂಗ್ಪೊಕ್ಪಿ ಜಿಲ್ಲೆಯಲ್ಲಿ ಈ ವರ್ಷದ ಮೇ ತಿಂಗಳಲ್ಲಿ ನಡೆದಿದ್ದ ಕೃತ್ಯದ ವಿಡಿಯೊ ಜುಲೈ ತಿಂಗಳಲ್ಲಿ ಬಯಲಾಗಿತ್ತು. ದೇಶದಾದ್ಯಂತ ಈ ಕೃತ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿತ್ತು. ಗುವಾಹಟಿಯ ಸಿಬಿಐ ವಿಶೇಷ ಕೋರ್ಟ್ನಲ್ಲಿ ದೋಷಾರೋಪ ಪಟ್ಟಿ ದಾಖಲಿಸಲಾಗಿದೆ.

ಆ ಪ್ರಕಾರ, ಆಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ 900–1000 ಜನರಿದ್ದ ಗುಂಪು ಕಾಂಗ್ಪೊಕ್ಪಿ ಜಿಲ್ಲೆಯ ಫೈನೊಮ್ ಗ್ರಾಮದಲ್ಲಿ ದಾಂದಲೆ ನಡೆಸಿದೆ. ಮನೆಗಳಿಗೆ ಬೆಂಕಿ ಹಚ್ಚಿ, ಆಸ್ತಿಗಳನ್ನು ಲೂಟಿ ಮಾಡಿದೆ. ಗ್ರಾಮಸ್ಥರ ಮೇಲೆ ಹಲ್ಲೆ ನಡೆಸಿ ಕೊಲೆ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದೆ ಎಂದು ಸಿಬಿಐ ಉಲ್ಲೇಖಿಸಿದೆ.

ಇಬ್ಬರು ಮಹಿಳೆಯರನ್ನು ಬೆತ್ತಲಾಗಿಸಿ ಮೆರವಣಿಗೆ ಮಾಡಿಸಿದ್ದು,ಅವರನ್ನು ಕೊಲೆ ಮಾಡಲಾಗಿದೆ. ಬಂಧಿಸಲಾಗಿರುವ ಆರೋಪಿಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದು, ಅದರಂತೆ ದೋಷಾರೋಪ ಪಟ್ಟಿಯನ್ನು ದಾಖಲಿಸಲಾಗಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.