ನವದೆಹಲಿ: ಅಲ್ಪಸಂಖ್ಯಾತ ವಿದ್ಯಾರ್ಥಿ ವೇತನ ಹಗರಣಕ್ಕೆ ಸಂಬಂಧಪಟ್ಟಂತೆ ತನಿಖೆ ಪ್ರಾರಂಭಿಸಿರುವ ಕೇಂದ್ರೀಯ ತನಿಖಾ ದಳ (ಸಿಬಿಐ), ನಕಲಿ ಸಂಸ್ಥೆಗಳ ವಿರುದ್ಧ ಎಫ್ಐಆರ್ ದಾಖಲಿಸಿದೆ.

2017ರಿಂದ 2022ರ ಅವಧಿಯಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿ ವೇತನ ಯೋಜನೆಯಡಿಯಲ್ಲಿ 830 ನಕಲಿ ಶಿಕ್ಷಣ ಸಂಸ್ಥೆಗಳು ಲಾಭ ಪಡೆದಿದ್ದು, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯಕ್ಕೆ ಸುಮಾರು ₹144.83 ಕೋಟಿ ನಷ್ಟ ಉಂಟು ಮಾಡಿವೆ ಎಂಬ ಆರೋಪ ಕೇಳಿಬಂದಿತ್ತು.

ಪ್ರಕರಣ ಕೈಗೆತ್ತಿಕೊಂಡಿರುವ ಸಿಬಿಐ, ಬ್ಯಾಂಕ್ಗಳು, ಶಿಕ್ಷಣ ಸಂಸ್ಥೆಗಳು, ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದೆ.

ವಿದ್ಯಾರ್ಥಿವೇತನ ಯೋಜನೆ ಅಡಿಯಲ್ಲಿ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ಜುಲೈ 10ರಂದು ಸಚಿವಾಲಯ ದೂರವೊಂದನ್ನು ದಾಖಲಿಸಿತ್ತು. 21 ರಾಜ್ಯಗಳ ಸುಮಾರು 1,572 ಸಂಸ್ಥೆಗಳನ್ನು ಪರಿಶೀಲನೆಗೆ ಒಳಪಡಿಸಿತ್ತು. ಇದರಲ್ಲಿ 830 ಸಂಸ್ಥೆಗಳು ನಕಲಿಯಾಗಿರುವುದು ಕಂಡುಬಂದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.